Categories
ಉಡುಪಿ

ಮಣಿಪಾಲದಲ್ಲಿ ಕಂಡಕ್ಟರ್ ಹಾಗೂ ಡ್ರೈವರ್ ಮಧ್ಯೆ ಫೈಟ್!

ಮಣಿಪಾಲದಲ್ಲಿ ಕಂಡಕ್ಟರ್ ಹಾಗೂ ಡ್ರೈವರ್ ಮಧ್ಯೆ ಫೈಟ್!

– ಬಸ್ ಟೈಮಿಂಗ್‌ ವಿಚಾರದಲ್ಲಿ ಗಲಾಟೆ!
– ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌!

NAMMUR EXPRESS NEWS
ಮಣಿಪಾಲ: ನಗರದ ಟೈಗರ್‌ ಸರ್ಕಲ್‌ ಖಾಸಗಿ ಬಸ್‌ ನಿಲ್ದಾಣದ ಬಳಿ ಟೈಮಿಂಗ್‌ ವಿಚಾರಕ್ಕೆ ಗಲಾಟೆ ನಡೆದು ಕಂಡಕ್ಟರ್ ಹಾಗೂ ಡ್ರೈವರ್ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.
ಎ.2ರಂದು ಸಂಜೆ 4:30 ಗಂಟೆ ಸುಮಾರಿಗೆ ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ ಇರುವ ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ ಟೈಮಿಂಗ್‌ ವಿಚಾರದಲ್ಲಿ ಆನಂದ್‌ ಬಸ್ಸಿನ ಕಂಡಕ್ಟರ್‌ ವಿಜಯ ಕುಮಾರ್‌ ಹಾಗೂ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್‌ ಆಲ್ಪಾಜ್‌ ನಡುವೆ ಗಲಾಟೆ ನಡೆದಿದೆ.ಈ ವಿಡಿಯೋ ಈಗ ಎಲ್ಲಾ ಕಡೆ ವೈರಲ್ ಆಗಿದೆ.
ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಉಚ್ಚಿಲ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್‌ ಆಲ್ಪಾಜ್‌(25), ಹಾಗೂ ಆನಂದ ಬಸ್ಸಿನ ಕಂಡಕ್ಟರ್‌ ವಿಜಯಕುಮಾರ್‌(25), ಚಿತ್ರದುರ್ಗ ಎಂದು ಗುರುತಿಸಲಾಗಿದೆ.
ಆರೋಪಿಗಳನ್ನು ದಸ್ತಗಿರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬಸ್‌ಗಳನ್ನು ಅಮಾನತ್ತು ಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.