ನೂತನ ಉದ್ಯಮ ಶುರು ಮಾಡಿದ ಗೋವಿಂದ ಬಾಬು ಪೂಜಾರಿ!
– ವಿನಯ್ ಗುರೂಜಿ ಅವರಿಂದ ಬೈಂದೂರಿನ ಹೇರಂಜಾಲುವಿನಲ್ಲಿ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಸಂಸ್ಥೆಯ ಚಿಕ್ಕಿ, ಚಕ್ಕುಲಿ, ಖಾದ್ಯಗಳ ಘಟಕ
– ಹಳ್ಳಿಯಲ್ಲಿ ಉದ್ಯೋಗ ಸೃಷ್ಟಿ: ಗಣ್ಯರ ಮೆಚ್ಚುಗೆ
NAMMUR EXPRESS NEWS
ಉಡುಪಿ: ಬೈಂದೂರು ತಾಲೂಕಿನ ಹೇರಂಜಾಲುವಿನಲ್ಲಿ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ ಕೇಂದ್ರದ ವತಿಯಿಂದ ಹೊಸದಾಗಿ ಸ್ಥಾಪಿಸಲಾಗಿರುವ ಚಿಕ್ಕಿ, ಚಕ್ಕುಲಿ ಮತ್ತು ಇತರ ಖಾದ್ಯಗಳ ಉತ್ಪಾದನಾ ಘಟಕದ ಉದ್ಘಾಟನೆ ಗಣ್ಯರ ಸಮ್ಮುಖದಲ್ಲಿ ನಡೆಯಿತು.
ಕೊಪ್ಪದ ಗೌರಿಗದ್ದೆ ಆಶ್ರಮದ ವಿನಯ ಗುರೂಜಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ, ರಾಜು ಪೂಜಾರಿ, ವಿಜಯ್ ಶೆಟ್ಟಿ, ಸಂಜೀವ್, ಗ್ರಾಮ ಪಂಚಾಯತಿ ಅಧ್ಯಕ್ಷೆ ನಾಗಮ್ಮ ದೇವಾಡಿಗ, ಗೌರಿ ದೇವಾಡಿಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಖ್ಯಾತ ಉದ್ಯಮಿ ಗೋವಿಂದ ಬಾಬು ಪೂಜಾರಿ ಮಾಲೀಕತ್ವದ ಈ ಉದ್ಯಮ ಸಾವಿರಾರು ಜನರಿಗೆ ಉದ್ಯೋಗ ನೀಡಲಿದೆ. ಕಾರ್ಯಕ್ರಮ ಉದ್ಘಾಟನೆ ಮಾಡಿದ ವಿನಯ್ ಗುರೂಜಿ ಸೇರಿ ಎಲ್ಲಾ ಗಣ್ಯರು ಬಾಬು ಅವರ ಉದ್ಯಮ, ಸಮಾಜ ಸೇವೆಯನ್ನು ಬಣ್ಣಿಸಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲುವಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ ಕೇಂದ್ರದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದ ಗಣ್ಯರು, ಎಲ್ಲಾ ಅಭಿಮಾನಿಗಳು, ಸಿಬ್ಬಂದಿಗೆ ಗೋವಿಂದ ಬಾಬು ಪೂಜಾರಿ ಅವರು ಧನ್ಯವಾದಗಳನ್ನು ಅರ್ಪಿಸಿದರು.