CSEET ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಅಮೋಘ ಸಾಧನೆ
– ರಾಜ್ಯಕ್ಕೆ ಮಾದರಿಯಾದ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಫಲಿತಾಂಶ
– 60 ವಿದ್ಯಾರ್ಥಿಗಳ ಪೈಕಿ 43 ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ
NAMMUR EXPRESS NEWS
ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ CSEET ಬರೆದ ವಾಣಿಜ್ಯ ವಿಭಾಗದ 60 ವಿದ್ಯಾರ್ಥಿಗಳ ಪೈಕಿ 43 ವಿದ್ಯಾರ್ಥಿಗಳು ತಮ್ಮ ಪ್ರಥಮ ಪ್ರಯತ್ನದಲ್ಲಿ ಮುಂದಿನ ಹಂತಕ್ಕೆ(CS Executive) ಅರ್ಹತೆಯನ್ನು ಪಡೆದಿರುತ್ತಾರೆ.
ಕುಮಾರಿ ಆಯಿಷಾತ್ ಖಸ್ಮೋನ ಮತ್ತು ರಿಯಾ ದೇವ್ ಇವರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯನ್ನು ಹೊಂದಿ, ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಸಾಧಕರಿಗೆ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ, ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆಕೆ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಸನ್ನ ಭೋಜ ಮತ್ತು ಉಪನ್ಯಾಸಕ ವೃಂದದವರು ಶುಭ ಹಾರೈಸಿದ್ದಾರೆ.








