Categories
ಉಡುಪಿ

ಜುಲೈ 9ಕ್ಕೆ ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಜುಲೈ 9ಕ್ಕೆ ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

– ಎಲ್ಲಾ ಶಾಲಾ, ಪಿಯುಸಿ ಕಾಲೇಜುಗಳಿಗೆ ರಜೆ
– ಡಿಗ್ರಿ, ಎಂಜಿನಿಯರಿಂಗ್ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳು, ಐಟಿಐ ಮತ್ತು ಸ್ನಾತಕೋತ್ತರ ಕೋರ್ಸ್ ಕಾಲೇಜಿಗೆ ರಜೆ ಇಲ್ಲ

NAMMUR EXPRESS NEWS

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಜುಲೈ 09 ರಂದು ಜಿಲ್ಲೆಯ ಎಲ್ಲಾ ಶಾಲಾ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಉಡುಪಿಯಲ್ಲಿ ಜು 9ರಂದು ಬಾರೀ ಮಳೆಯಾಗುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಡಿಗ್ರಿ, ಎಂಜಿನಿಯರಿಂಗ್ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳು, ಐಟಿಐ ಮತ್ತು ಸ್ನಾತಕೋತ್ತರ ಕೋರ್ಸ್‌ಗಳು ರಜೆ ಘೋಷಣೆ ಅನ್ವಯವಾಗುವುದಿಲ್ಲ.

ತಗ್ಗುಪ್ರದೇಶ, ನೆರೆ ನೀರು ತುಂಬುವ ತಗ್ಗು ಪ್ರದೇಶ ನದಿ, ಸಮುದ್ರ ತೀರ ಪ್ರದೇಶಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳುವಂತಿಲ್ಲ, ಮೀನುಗಾರಿಕೆಗೆ ಸಮುದ್ರಕ್ಕೆ ತೆರಳುವಂತಿಲ್ಲ, ವಿದ್ಯುತ್ ಕಂಬಗಳ ಬಳಿ ತೆರಳುವಂತಿಲ್ಲ, ಪ್ರಾಕೃತಿಕ ವಿಕೋಪದ ಸೂಚನೆ ಕಂಡು ಬಂದಲ್ಲಿ‌ ಕೂಡಲೇ ಸ್ಥಳೀಯಾಡತಕ್ಕೆ ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.