ಟಾಪ್ 4 ನ್ಯೂಸ್ ಕರಾವಳಿ
ಮುಖ್ಯಮಂತ್ರಿ ಫೋಟೋಗೆ ಅವಮಾನ- ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಕೇಸ್!
– ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ ದಂಧೆ ; ಇಬ್ಬರು ಅರೆಸ್ಟ್!
– ಕಾರವಾರ: ಐದು ನಿಮಿಷದಲ್ಲಿ 500 ಮೀಟರ್ ಓಡಿ ರೈಲ್ವೆ ದುರಂತ ತಪ್ಪಿಸಿದ!
– ಕುಂದಾಪುರ: ಬೃಹತ್ ಗಾತ್ರದ ಹೆಬ್ಬಾವು ಪತ್ತೆ!
NAMMUR EXPRESS NEWS
ಉಡುಪಿ: ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ಘೋಷಿಸಿದ್ದ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಯನ್ನು ತಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ವೇಳೆ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದಕ್ಕೆ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲಾಗಿದೆ.
ಹೌದು ಕಳೆದ 2 ದಿನಗಳ ಹಿಂದೆ ಉಡುಪಿಯಲ್ಲಿ ಪ್ರಾಂಶುಪಾಲರಿಗೆ ಘೋಷಿಸಿದ್ದ ಪ್ರಶಸ್ತಿ ತಡೆ ಹಿಡಿದಿದ್ದಕ್ಕೆ ಬಿಜೆಪಿ ನಾಯಕರು ಮಣಿಪಾಲದ ಸಿಂಡಿಕೇಟ್ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ೇಳೆ ರ್ತ ತೆದು ಮುಖ್ಯಮಂತ್ರಿಗಳ ಪ್ರತಿಕೃತಿ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದರು. ಹಿಂದೂ ವಿರೋಧಿ ಸಿದ್ದರಾಮಯ್ಯರನ್ನು ತೊಲಗಿಸಿ ಎಂದು ಘೋಷಣೆ ಕೂಗಿದ್ದರು.
ಶಾಂತಿ ಭಂಗ ತರುವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆ ಎಂದು ಎನ್ಎಸ್ಯುಐ ಮುಖಂಡ ಸೌರಭ್ ಬಲ್ಲಾಳ್ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಸದಸ್ಯರಾದ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ: ಇಬ್ಬರು ಅರೆಸ್ಟ್!
ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ವೈಶ್ಯವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಸಾಣೂರು ಗ್ರಾಮದ ಅವಿನಾಶ್ ಕಂಪೌಂಡ್ ಬಳಿ ಓರ್ವರ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಸ್ಥಳಕ್ಕೆ ದಾಳಿ ನಡೆಸಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಮನೆಯಲ್ಲಿ ಇದ್ದ ಭರತ್ ಎಂಬಾತನನ್ನು ದಸ್ತಗಿರಿ ಮಾಡಿ ಕೃತ್ಯಕ್ಕೆ ಸಂಬಂಧಿಸಿದ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಓರ್ವ ಸಂತ್ರಸ್ಥೆ ಮಹಿಳೆಯನ್ನು ರಕ್ಷಿಸಿದ್ದು, ಆಪಾದಿತರಾದ ಭರತ್ ಕುಮಾರ್, ಮನೆಯ ಮಾಲೀಕರು ಸೇರಿ ಮಹಿಳೆಯ ದುರ್ವ್ಯಾಪಾರ ನಡೆಸಿ ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಿ ಅಕ್ರಮ ಲಾಭ ಪಡೆದ ಆರೋಪದ ಕುರಿತು ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐದು ನಿಮಿಷದಲ್ಲಿ 500 ಮೀಟರ್ ಓಡಿ ರೈಲ್ವೆ ದುರಂತ ತಪ್ಪಿಸಿದ!
ಕಾರವಾರ: ರೈಲ್ವೆ ನಿರ್ವಾಹಕರೊಬ್ಬರು ಹಳಿಯ ಮೇಲೆ ಐದು ನಿಮಿಷದಲ್ಲಿ 500 ಮೀಟರ್ ಓಡಿ ರೈಲ್ವೆ ದುರಂತವೊಂದನ್ನು ತಪ್ಪಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ನಡೆದಿದೆ.
ಭಟ್ಕಳದ ಮಾಧವ ನಾಯ್ಕ ರೈಲು ದುರಂತ ತಪ್ಪಿಸಿದ ರೈಲ್ವೆ ನಿರ್ವಾಹಕ.ಕೊಂಕಣ ರೈಲ್ವೆ ಮಾರ್ಗದ ಕುಮಟಾ-ಹೊನ್ನಾವರ ನಡುವಿನ ಹಳಿಯ ವೆಲ್ಡಿಂಗ್ ಬಿಟ್ಟಿತ್ತು. ಇದಂದ ಇದೇ ಮಾರ್ಗದಲ್ಲಿ ಬರುವ ರಾಜಧಾನಿ ಎಕ್ಸೆಸ್ ರೈಲು ಹಳಿ ತಪ್ಪಿ ದುರಂತವಾಗುವ ಸಾಧ್ಯತೆ ಇತ್ತು.ರಾತ್ರಿ ಕರ್ತವ್ಯದಲ್ಲಿದ್ದ ರೈಲ್ವೆ ನಿರ್ವಾಹಕ ಮಾಧವ ನಾಯ್ಕ ಹಳಿ ಪರಿಶೀಲನೆ ಮಾಡುವಾಗ ಹಳಿಯ ವೆಲ್ಡಿಂಗ್ ಬಿಟ್ಟಿರುವುದು ಪತ್ತೆಯಾಗಿತ್ತು. ಸ್ಟೇಶನ್ ಮಾಸ್ಟರ್ಗೆ ಕರೆ ಮಾಡಿದ್ದರೂ ಸಂಪರ್ಕ ಸಾಧ್ಯವಾಗಿರಲಿಲ್ಲ. ಹೀಗಾಗಿ ನಿರ್ವಾಹಕ ಕೆಂಪು ದೀಪ ಹಿಡಿದು ಹಳಿ ಮೇಲೆ 500 ಮೀಟರ್ ದೂರದವರೆಗೆ ಓಡಿ ಹೊನ್ನಾವರದಿಂದ ಕಾರವಾರದತ್ತ ಬರುತಿದ್ದ ರೈಲಿಗೆ ಕೆಂಪು ದೀಪ ತೋರಿಸಿ ರೈಲನ್ನು ನಿಲ್ಲಿಸಿದ್ದಾರೆ.
ಕುಂದಾಪುರ: ಬೃಹತ್ ಗಾತ್ರದ ಹೆಬ್ಬಾವು ಪತ್ತೆ!
ಕುಂದಾಪುರ: ಬೃಹತ್ ಗಾತ್ರದ ಹೆಬ್ಬಾವೊಂದು ಮನೆಯ ಆವರಣದಲ್ಲಿ ಪ್ರತ್ಯಕ್ಷವಾದ ಘಟನೆ ಭಾನುವಾರ ರಾತ್ರಿ ಕುಂದಾಪುರ ತಾಲೂಕಿನ ಹಂಗಳೂರಿನ ಕುಸಗಿಡ್ಡದಲ್ಲಿ ನಡೆದಿದೆ.ಕುಸಗಿಡ್ಡದಲ್ಲಿರುವ ಲಕ್ಷ್ಮಿ ದೇವಾಡ್ತಿ ಇವರ ಮನೆಯ ಆವರಣದಲ್ಲಿ ಸುಮಾರು 10 ಅಡಿ ಉದ್ದದ 30 ಕೆಜಿ ತೂಕದಷ್ಟಿರುವ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದ್ದು ಮನೆ ಮಂದಿ ಭಯಬೀತರಾಗಿ ತಕ್ಷಣ ಮನೆಯವರು ಪಂಚಾಯತ್ ಸದಸ್ಯ ಲೋಕೇಶ್ ಅಂಕದಕಟ್ಟೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಲೋಕೇಶ್ ಅಂಕದಕಟ್ಟೆ ಹಾಗೂ ಸ್ಥಳೀಯ ಯುವಕರು ಸೇರಿ ಕಾರ್ಯಾಚರಣೆ ನಡೆಸಿ 10 ಅಡಿ ಉದ್ದದ ಹೆಬ್ಬಾವುವನ್ನು ಸೆರೆಹಿಡಿದು ಕುಂದಾಪುರ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.