ಕೊಕ್ಕರ್ಣೆ|ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವು – ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಯುವಕ ಶವವಾಗಿ ಪತ್ತೆ!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಕೊಕ್ಕರ್ಣೆಯಲ್ಲಿ ನಡೆದ ಯುವತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಯುವಕ ಕಾರ್ತಿಕ್ ಪೂಜಾರಿ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಇಂದು ಬೆಳಗ್ಗೆ ರಕ್ಷಿತಾಳನ್ನು ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದ ಕಾರ್ತಿಕ್, ಸ್ಥಳದಿಂದ ಪರಾರಿಯಾಗಿದ್ದ. ಚಿಕಿತ್ಸೆಗೆ ದಾಖಲಾದ ರಕ್ಷಿತಾ ಸಂಜೆ ವೇಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು.
ಈ ನಡುವೆ ಪರಾರಿಯಾಗಿದ್ದ ಆರೋಪಿ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.