Categories
ಉಡುಪಿ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ!

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ!
– ಅಪರಿಚಿತ ವ್ಯಕ್ತಿಯಿಂದ ಕೊಲೆ: ಕಾರಣ ಏನು?
– ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು: ತನಿಖೆ

NAMMUR EXPRESS NEWS
ಉಡುಪಿ: ಒಂದೇ ಕುಟುಂಬ ನಾಲ್ವರನ್ನು ಕೊಲೆ ಮಾಡಿದ ಘಟನೆ ಮಲ್ಪೆ ಠಾಣೆ ವ್ಯಾಪ್ತಿಯ ನೇಜಾರುನಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಈ ಘಟನೆ ಕರಾವಳಿಯನ್ನು ಬೆಚ್ಚಿ ಬೀಳಿಸಿದೆ. ಹಸೀನಾ, ಅವರ ಮಕ್ಕಳಾದ ಅಫ್ಘಾನ್(23), ಅಯಾಝ್ (21) ಮತ್ತು ಅಸೀಮ್(14) ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಚೂರಿಯಿಂದ ಚುಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅನುಮಾಸ್ಪದ ವ್ಯಕ್ತಿ ಬೋಳು ತಲೆಯವನಾಗಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಡಿವೈಎಸ್ಪಿ ಆಗಮಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.