Categories
ಉಡುಪಿ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಮೇಲುಗೈ!

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಮೇಲುಗೈ!

– ಉಡುಪಿ ಜಿಲ್ಲೆಗೆ ಶೇ 93.90 ಮತ್ತು ದಕ್ಷಿಣ ಕನ್ನಡ ದ್ವಿತೀಯ ಸ್ಥಾನ
– ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ದ. ಕನ್ನಡದ ವಿದ್ಯಾರ್ಥಿಗಳೇ ಫಸ್ಟ್!

NAMMUR EXPRESS NEWS
ಮಂಗಳೂರು: ಸೆಕೆಂಡ್ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುತ್ತಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸುತ್ತಿದ್ದಾರೆ. 1.30ರ ವೇಳೆಗೆ ವೆಬ್​​ಸೈಟ್​ನಲ್ಲಿ ಲಭ್ಯವಿರಲಿದೆ. ದ್ವಿತೀಯ ಪಿಯುಸಿ ಫಲಿತಾಂಶದ ಸಂಪೂರ್ಣ ಮಾಹಿತಿ ಇಲ್ಲಿದೆ.
ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಜಿಲ್ಲೆ ಪ್ರಥಮ ಉಡುಪಿ ಜಿಲ್ಲೆ ಶೇ 93.90 ಫಲಿತಾಂಶ ಗಳಿಸಿದ್ದು, ಮೊದಲ ಸ್ಥಾನ ಪಡೆದಿದೆ.
ರಾಜ್ಯದ 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇಂದು ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ತಮ್ಮ ಪಿಯುಸಿ ಫಲಿತಾಂಶ ನೋಡಲು ಕಾತುರರಾಗಿದ್ದಾರೆ.

– ವಿಜ್ಞಾನ ವಿಭಾಗದಲ್ಲಿ ದಕ್ಷಿಣ ಕನ್ನಡದ ಅಮೂಲ್ಯ ಕಾಮತ್ ಫಸ್ಟ್ ಪ್ಲೇಸ್!

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ(2nd PUC Result)ವನ್ನು ಪ್ರಕಟಿಸಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. 93.90 ಶೇಕಾಡ ಫಲಿತಾಂಶ ಪಡೆದು ಉಡುಪಿ ಮೊದಲ ಸ್ಥಾನದಲ್ಲಿದೆ. ಯಾದಗಿರಿ ಜಿಲ್ಲೆಯು ಶೇ.48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ.
ದಕ್ಷಿಣ ಕನ್ನಡದ ಎಕ್ಸ್​ಪರ್ಟ್​ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.

– ವಾಣಿಜ್ಯ ವಿಭಾಗದಲ್ಲಿ ದ. ಕನ್ನಡದ ಕೆನಾರ ಕಾಲೇಜು‌ ವಿದ್ಯಾರ್ಥಿನಿಗೆ ಮೊದಲ ಸ್ಥಾನ

ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ ಗೆ ಮೊದಲ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು‌ ವಿದ್ಯಾರ್ಥಿನಿಯಾಗಿದ್ದಾರೆ. 600 ಕ್ಕೆ ‌ 599 ಅಂಕಗಳನ್ನು ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ.ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದು, 600 ಕ್ಕೆ ‌597 ಅಂಕ ಪಡೆದಿದ್ದಾರೆ.

One reply on “ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಮೇಲುಗೈ!”

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.