ಉಡುಪಿ: ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದ ಹೆಬ್ಬಾಳಕರ್!!
NAMMUR EXPRESS NEWS
ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಸಚಿವರ ರಾಜಕಾರಣ ಮಾಡಲು ಬೇರೆ ವಿಚಾರ ಉಳಿದಿಲ್ಲ. ಮೊದಲು ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದರ ಗ್ಯಾರಂಟಿ ಯೋಜನೆಗಳು ಯಶಸ್ವಿ ಆಗುವುದಿಲ್ಲ ಎಂದರ ನಾವು 136 ಸೀಟು ಗೆದ್ದರೂ ಆರು ತಿಂಗಳು ಸರ್ಕಾರ ಉಳಿಯಲ್ಲ ಎಂದರು, ಜನರ ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತದೆ. ಮಾತನಾಡಲು ಅವರಿಗೆ ಬೇರೇನೂ ಉಳಿದಿಲ್ಲ ಎಂದು ದೂರಿದರು.
ಮಳೆಯಾಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ!!
ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಲಕ್ಷಣ ಇದೆ. ಹೀಗಾಗಿ ಮಳೆ ಅವಾಂತರ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಯಾವುದೇ ಪ್ರಮಾಣದಲ್ಲಿ ಮಳೆ ಬಂದರೂ ನಾವು ಸಿದ್ಧವಾಗಿದ್ದೇವೆ ಎಂದು ಸಚಿವರು ಹೇಳಿದರು.