ಉಡುಪಿ: ಕುಂಬಳೆಯಲ್ಲಿ ನಾಪತ್ತೆಯಾಗಿದ್ದ ಪ್ರೇಮಿಗಳು ಪತ್ತೆ
NAMMUR EXPRESS NEWS
ಉಡುಪಿ: ನಾಪತ್ತೆಯಾಗಿದ್ದ ಪ್ರೇಮಿಗಳನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ನಡೆದಿದೆ. ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಗೆ ಮನೆಯಲ್ಲಿ ವಿರೋಧ ವ್ಯಕ್ತವಾಗಿ ನಾಪತ್ತೆಯಾಗಿದ್ದರು. ಮನೆಮಂದಿ ಹುಡುಕಾಟ ನಡೆಸಿದರೂ, ಯುವಕ ಯುವತಿ ಪತ್ತೆಯಾಗದೆ ಇರುವುದರಿಂದ, ಕುಂಬಳೆ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕ ಯುವತಿಯ ವರ್ತನೆಯಲ್ಲಿ ಅನುಮಾನಗೊಂಡು ವಿಚಾರಿಸಿದಾಗ, ಕುಂಬಳೆಯಿಂದ ನಾಪತ್ತೆಯಾಗಿದ್ದವರೆಂದು ತಿಳಿದುಬಂದಿದೆ. ಬಳಿಕ ಅವರು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಇಳಿಸಿ, ಇನ್ಸ್ಪೆಕ್ಟರ್ ಮಧುಸೂದನ್ ಅವರಿಗೆ, ಹಸ್ತಾಂತರಿಸಿದರು. ಪ್ರೇಮಿಗಳನ್ನು ಉಡುಪಿ ನಗರ ಮಹಿಳಾ ಪೋಲಿಸ್ ಠಾಣೆಯ ವಶಕ್ಕೆ ಒಪ್ಪಿಸಿದರು. ಅಲ್ಲಿ ವಿಚಾರಿಸಲ್ಪಟ್ಟಾಗ ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳೆಂದು ದೃಢಪಟ್ಟಿತು. ಬಳಿಕ ಪ್ರೇಮಿಗಳನ್ನು ಕುಂಬಳೆಯ ಪೋಲಿಸರಿಗೆ ನೀಡಲಾಯಿತು.