ಉಡುಪಿ ತ್ರಿಶಾ ಪಿ.ಯು. ಕಾಲೇಜಿಗೆ ಸತತ ಎರಡನೇ ಬಾರಿ 100% ರಿಸಲ್ಟ್!
– ರಾಜ್ಯ ಮಟ್ಟದಲ್ಲಿ ಗಮನ ಸೆಳೆದ ಕ್ರಿಯೇಟಿವ್ ಸಹಭಾಗಿತ್ವದ ತ್ರಿಶಾ ಪಿ. ಯು ಕಾಲೇಜು
– ರಾಜ್ಯಕ್ಕೆ ಈ ಬಾರಿಯೂ 8ನೇ ರ‍್ಯಾಂಕ್
– ಸಂಸ್ಥೆಯು ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ
NAMMUR EXPRESS NEWS
ಉಡುಪಿ: ಪಿ. ಯು ಫಲಿತಾಂಶದಲ್ಲಿ ಆರಂಭಿಕ ವರ್ಷದಲ್ಲಿಯೇ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಸಂಸ್ಥೆ ಉಡುಪಿಯ ಶಾಖೆಯಲ್ಲೂ ಆ ಯಶಸ್ಸನ್ನು ಮುಂದುವರೆಸಿದೆ.
ತನ್ನ ಪ್ರಥಮ ವರ್ಷದ ಫಲಿತಾಂಶದಲ್ಲೇ ಶೇ.100 ಗಳಿಸುವುದರ ಜತೆಗೆ ಪಿ.ಯು. ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ರ‍್ಯಾಂಕ್ ಗಳಿಸುವ ಮೂಲಕ ಸಂಸ್ಥೆ ಕೀರ್ತಿ ಗಳಿಸಿತ್ತು. ಇದೀಗ ಮತ್ತೆ ಫಲಿತಾಂಶದಲ್ಲಿ ಶೇ.100% ಗಳಿಸುವುದರ ಮೂಲಕ ಎಲ್ಲೆಡೆ ಮಿಂಚುತ್ತಿದೆ.
ಜೊತೆಗೆ ಅಮೃತ ಅವರು ರಾಜ್ಯಕ್ಕೆ ಈ ಬಾರಿಯೂ 8ನೇ ರ‍್ಯಾಂಕ್ ಪಡೆಯುವ ಮೂಲಕ ಮೇಲುಗೈ ಸಾಧಿಸಿದ್ದಾರೆ.
94 ಮಕ್ಕಳೊಂದಿಗೆ ಪ್ರಾರಂಭವಾದ ವಿದ್ಯಾಸಂಸ್ಥೆಯಲ್ಲಿ ಇದೀಗ 400ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಎಲ್ಲೆಡೆ ಗಮನ ಸೆಳೆಯುತ್ತಿದೆ.
ಸಂಸ್ಥೆ ವಿದ್ಯಾರ್ಥಿಗಳಲ್ಲಿ ಕೇವಲ ಅಂಕ ಗಳಿಕೆಯ ಹಸಿವನ್ನು ಮಾತ್ರ ಬೆಳೆಸದೆ ಜೀವನ ಮೌಲ್ಯಗಳು, ನೈತಿಕತೆ, ಸದ್ವಿಚಾರಗಳನ್ನು ಪ್ರತಿನಿತ್ಯ ಬೋಧಿಸುತ್ತಿರುವುದು ಸಂಸ್ಥೆಯು ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ.
