ಉಡುಪಿಯ ಕಾಲೇಜು ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ : ಕೇಸ್!
– ಮೂವರು ವಿದ್ಯಾರ್ಥಿನಿಯರಿಂದ ಚಿತ್ರೀಕರಣ
– ಸ್ವಯಂ ಪ್ರೇರಿತ ಕೇಸ್!.. ವಿಡಿಯೋ ಹುಚ್ಚು ತಂದ ಸಂಕಟ!
NAMMUR EXPRESS NEWS
ಉಡುಪಿ: ಉಡುಪಿ ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂಬ ಘಟನೆಗೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ಈಗ ಭಾರೀ ಸದ್ದು ಮಾಡಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ವಿಡಿಯೋ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫಿಯಾ, ಅಲೀಮಾ ಈ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲಿಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಕೃತ್ಯ, ವ್ಯಕ್ತಿಯ ಖಾಸಗಿ ಚಿತ್ರವನ್ನು ಚಿತ್ರೀಕರಿಸುವ ಕೃತ್ಯ, ಮಾಹಿತಿಯನ್ನು ಮತ್ತು ದಸ್ತಾವೇಜನ್ನು ಹಾಜರುಪಡಿಸಲು ತಪ್ಪುವ ಕೃತ್ಯದ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 509, 204, 175,34, ಮತ್ತು 66(ಇ) ಅಡಿ ದೂರು ದಾಖಲಾಗಿದೆ.
ಉಡುಪಿಯ ಕಾಲೇಜೊಂದರ ಟಾಯ್ಲೆಟ್ನಲ್ಲಿ ಮೂವರು ವಿದ್ಯಾರ್ಥಿನಿಯರಿಂದ ಭಿನ್ನ ಕೋಮಿಗೆ ಸೇರಿದ ಯುವತಿಯ ಚಿತ್ರೀಕರಣ ಮಾಡಲಾಗಿತ್ತು ಕಾಲೇಜಿನ 3 ಮಂದಿ ವಿದ್ಯಾರ್ಥಿನಿಯರು ಕ್ಯಾಮರದ ಮೂಲಕ ಇನ್ನೊಬ್ಬ ವಿದ್ಯಾರ್ಥಿನಿಯನ್ನು ಅಸಭ್ಯವಾಗಿ ಚಿತ್ರೀಕರಿಸಿದ್ದರು. ಇದು ಕಾಲೇಜಿನ ಗಮನಕ್ಕೆ ಬಂದು ಆರೋಪಿ ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ. ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿರುವ 3 ಮಂದಿ ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ತಮಾಷೆಗಾಗಿ ವೀಡಿಯೋ ಮಾಡಿರುವುದಾಗಿ ಮೂವರು ಲಿಖಿತವಾಗಿ ಹೇಳಿದ್ದಾರೆ. ಎಂದು ಕಾಲೇಜಿನ ಆಡಳಿತ ಮಂಡಳಿ ಘಟನೆ ಬಗ್ಗೆ ಸ್ಪಷ್ಟನೆ ನೀಡಿತ್ತು.
ವಿಡಿಯೋ ಹುಚ್ಚು ತಂದ ಸಂಕಟ!
ಇಂದಿನ ಯುವ ಜನತೆಯ ವಿಡಿಯೋ ಹುಚ್ಚು ತಮ್ಮ ಬದುಕಿಗೆ ಶಾಕ್ ನೀಡುವ ಪ್ರಕರಣ ದಿನೇ ದಿನೇ ಹೆಚ್ಚುತ್ತಿದೆ. ಕೊಲ್ಲೂರು ಬಳಿ ಯುವಕನೊಬ್ಬ ವಿಡಿಯೋ ಮಾಡಲು ಹೋಗಿ ಕೊಚ್ಚಿಕೊಂಡು ಹೋಗಿದ್ದಾನೆ. ಪ್ರತಿ ದಿನ ಒಂದಲ್ಲ ಒಂದು ಘಟನೆ ನಡೆಯುತ್ತಿದೆ. ಈ ನಡುವೆ ಈ ಘಟನೆ ಭಾರೀ ಕುತೂಹಲ ಮೂಡಿಸಿದೆ.
ಇದನ್ನೂ ಓದಿ : ಖಾಸಗಿ ಚಾನಲ್ ವಿರುದ್ದ ಕಿಮ್ಮನೆ 5 ಕೋಟಿ ಕೇಸ್!?
HOW TO APPLY : NEET-UG COUNSELLING 2023