ಏ. 06ಕ್ಕೆ ಕನ್ಯಾಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ!
– ಶ್ರೀರಾಮ ಗೆಳೆಯರ ಬಳಗ ಕೋಡಿ ಕನ್ಯಾಣ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜನೆ
– ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ಕಾರ್ಯಕ್ರಮ
NAMMUR EXPRESS NEWS
ಉಡುಪಿ: ಶ್ರೀರಾಮ ಗೆಳೆಯರ ಬಳಗ ಕೋಡಿ ಕನ್ಯಾಣ ಇವರ ತೃತೀಯ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಏ. 06, (ನಾಳೆ) ಭಾನುವಾರದಂದು ಬೆಳಿಗ್ಗೆ 8.30ರಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಡಿ ಕನ್ಯಾಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ತಾವೆಲ್ಲರೂ ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಭಾಗಿಯಾಗುವ ಮೂಲಕ ಸಹಕರಿಸಬೇಕಾಗಿ ಈ ಮೂಲಕ ವಿನಂತಿಕೊಳ್ಳಲಾಗಿದೆ.
ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ, ಜೀವ ಉಳಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ.
