- ನವ ದೆಹಲಿಯ ಆಸ್ಪತ್ರೆಯಲ್ಲಿ ದಾಖಲು: ಚಿಕಿತ್ಸೆ
- ಭಾರತಕ್ಕೆ ಮೊದಲ ವಿಶ್ವಕಪ್ ತಂದುಕೊಟ್ಟ ಸರದಾರ!
ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 1983ರಲ್ಲಿ ಭಾರತಕ್ಕೆ ಮೊಟ್ಟ ಮೊದಲ ಕ್ರಿಕೆಟ್ ವಿಶ್ವಕಪ್ ಗೆದ್ದು ಕೊಟ್ಟ ಕಪಿಲ್ ದೇವ್ ನವ ದೆಹಲಿಯ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಘಟನೆ ಬಳಿಕ ಲಕ್ಷಾಂತರ ಅಭಿಮಾನಿಗಳು ಕಪಿಲ್ ದೇವ್ ಅವರ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ರಲ್ಲಿ ಕಪಿಲ್ ದೇವ್ ಕ್ರಿಕೆಟ್ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುವ ಮೂಲಕ ಸಾಕಷ್ಟು ಸಕ್ರಿಯರಾಗಿದ್ದರು. ಭಾರತದ ಮಾಜಿ ನಾಯಕ ಮಧುಮೇಹ ಸಂಬಂಧಿತ ಆರೋಗ್ಯ ಸಮಸ್ಯೆಗಳನ್ನೂ ಹೊಂದಿದ್ದು ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.
ಭಾರತದ ಕ್ರಿಕೆಟ್ ದೇವರು!: ಲಾಡ್ರ್ಸ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ 1983ರಲ್ಲಿ ಭಾರತ ವಿಶ್ವಕಪ್ ಗೆಲ್ಲುವುದಕ್ಕೆ ಕಾರಣವಾಗಿದ್ದರು. ಕಪಿಲ್ ದೇವ್ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಬರಬೇಕಿದ್ದು, ಈಗ ಸ್ಥಿರರಾಗಿದ್ದಾರೆಂದು ಹೇಳಲಾಗುತ್ತಿದೆ. 1959 ಜನವರಿ 6ರಂದು ಜನಿಸಿದ್ದರು. ಆಲ್ ರೌಂಡರ್ ಆಗಿ ಭಾರತಕ್ಕೆ ಗೆಲುವು ತಂದುಕೊಟ್ಟ ನಾಯಕನಾಗಿದ್ದರು.