ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಅದ್ದೂರಿ ಜಯಂತಿ ಹಾಗೂ ಸಮಾಜ ಬಾಂಧವರ ಬೃಹತ್ ಕಾರ್ಯಕ್ರಮ ಅ. 24ರಂದು ನಡೆಯಲಿದೆ.
ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಅದ್ದೂರಿ ಹಾಗೂ ಅರ್ಥ ಪೂರ್ಣವಾಗಿ ಏರ್ಪಡಿಸಲಾಗುತ್ತಿದೆ. ತೀರ್ಥಹಳ್ಳಿ, ಹೊಸನಗರ, ಶಿವಮೊಗ್ಗ ಜಿಲ್ಲೆಯ ಈಡಿಗ ಹಾಗೂ ಬಿಲ್ಲವ ಸಮಾಜ ಬಾಂಧವರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಈಡಿಗ ಹಾಗೂ ಬಿಲ್ಲವ ಸಮುದಾಯದ ಬಿ.ಕೆ.ಹರಿಪ್ರಸಾದ್, ಸಚಿವ ಎಸ್.ಮಧು ಬಂಗಾರಪ್ಪ, ಪ್ರಮುಖ ನಾಯಕರಾದ ಕೋಟಾ ಶ್ರೀನಿವಾಸಪೂಜಾರಿ, ವಿ.ಸುನೀಲ್ ಕುಮಾರ್, ಬೇಳೂರು ಗೋಪಾಲಕೃಷ್ಣ, ಉಮಾನಾಥ್ ಕೋಟ್ಯಾನ್ ಮುಂತಾದ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೇರು ಸಮಾಜವಾದಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಸಮಾರಂಭದಲ್ಲಿ ಗೌರವಿಸಲಾಗುವುದು.
ಸಮಾಜದ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ
ದಿವ್ಯ ಸಾನಿಧ್ಯ ಶ್ರೀ ಶ್ರೀ ರೇಣುಕಾನಂದ ಸ್ವಾಮೀಜಿ ಯವರು ವಹಿಸುತ್ತಿದ್ದಾರೆ, ಕಾರ್ತಿಕೇಯ ಪೀಠದ ಶ್ರೀ ಶ್ರೀ ಯೋಗೇಂದ್ರ ಅವದೂತರು, ಸಿಗಂದೂರು ಚೌಡೇಶ್ವರಿ ದೇವಾಲಯ ಧರ್ಮದರ್ಶಿ ರಾಮಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ.
ಬೃಹತ್ ಮೆರವಣಿಗೆ ಬಳಿಕ ಸಭಾ ಕಾರ್ಯಕ್ರಮ
ಅಕ್ಟೋಬರ್ 24ರ ಶನಿವಾರ ಬೆಳಿಗ್ಗೆ 9:00 ಗಂಟೆಗೆ ಕುಶಾವತಿ ನೆಹರು ಪಾರ್ಕ್ ಮುಂಭಾಗದಿಂದ ಬೃಹತ್ ಮೆರವಣಿಗೆ ಆರಂಭಗೊಂಡು ಸುವರ್ಣ ಸಂಸ್ಕೃತಿ ಭವನದ ಆವರಣದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು , ಸಹಸ್ರ, ಸಹಸ್ರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಪ್ರತಿ ಮನೆಯಿಂದಲೂ ಸಮಾಜ ಬಾಂಧವರು ಆಗಮಿಸಲಿದ್ದಾರೆ. ತೀರ್ಥಹಳ್ಳಿಯ ಪಟ್ಟಣ ಹಾಗೂ ಎಲ್ಲಾ ಗ್ರಾಮದಿಂದ ಸಮುದಾಯದವರು ಆಗಮಿಸಲಿದ್ದಾರೆ.
ಈಡಿಗ ಹಾಗೂ ಬಿಲ್ಲವ ಸಮಾಜದ ಸರ್ವರನ್ನು ಸ್ವಾಗತಿಸಲಾಗಿದೆ







