ಬೆಂಗಳೂರು: ಪೌರಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಚುನಾವಣೆಗೆ ವಾರ್ಡ್ ವಾರು ಮೀಸಲಾತಿ ನಿಗದಿಗೊಳಿಸುವಂತೆ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಉಚ್ಚನ್ಯಾಯಾಲಯಕ್ಕೆ ಮಂಗಳವಾರದಂದು ಮಾಹಿತಿ ನೀಡಿದೆ. ಇದರ ಪ್ರಕಾರ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿಗೆ ಸಂಬಂಧಿಸಿದಂತಹ ಅಂತಿಮ ಅಧಿಸೂಚನೆಯನ್ನು ತುರ್ತಾಗಿ ಹೊರಡಿಸುವಂತೆ, ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ ಮಾಡಿಕೊಂಡು ರಾಜ್ಯ ಚುನಾವಣಾ ಆಯೋಗವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೇರಿದಂತೆ ಇತರ ತಕರಾರು ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಅನುಶಿವರಾಮನ್ ಮತ್ತು ಕೆ.ಎಸ್.ಭರತ್ ಕುಮಾರ್ ಅವರಿದ್ದಂತಹ ವಿಭಾಗಿಯ ನ್ಯಾಯಪೀಠಕ್ಕೆ ಸಲ್ಲಿಸಿದೆ.
ಮಂಗಳವಾರದಂದು ವಿಚಾರಣೆಗೆ ಬಂದ ಕಾರಣದಿಂದಾಗಿ ಹೆಚ್ಚುವರಿ ನ್ಯಾಯವಾದಿಗಳಾದ ಜನರಲ್ ಪ್ರತಿಮಾ ಹೊನ್ನಾಪುರ ಅವರು ನ್ಯಾಯಪೀಠಕ್ಕೆ ಈ ವಿಚಾರವಾಗಿ ಮಾಹಿತಿಯನ್ನು ನೀಡಿದ್ದಾರೆ ಎನ್ನುವ ಸಂಗತಿ ತಿಳಿದುಬಂದಿದೆ.







