ಬೆಂಗಳೂರು: ರಾಜ್ಯದಲ್ಲಿ 3 ದಿನ ಮಳೆ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಗುರುವಾರದಂದು ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಪರಿಣಾಮವಾಗಿ ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಕೊಡಗು, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆಯು ತಿಳಿಸಿದೆ. ಗುರುವಾರ ಕರಾವಳಿ, ಮಲೆನಾಡು ಭಾಗದಲ್ಲಿ ಅನೇಕ ಕಡೆ ಮಳೆಯಾಗಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು, ವಾಹನ ಸವಾರರು ಜಾಗರೂಕರಾಗಿ ಸಂಚರಿಸಬೇಕೆಂದು ಹವಾಮಾನ ಇಲಾಖೆಯು ಸಾರ್ವಜನಿಕರಿಗೆ ಸೂಚನೆಯನ್ನು ನೀಡಿದೆ.
ಅಡಿಕೆ ಸುಲಿಯುವ ಯಂತ್ರಕ್ಕಾಗಿ ವಿ ಟೆಕ್ ಇಂಜಿನಿಯರ್ಸ್ ಎಲ್ಲರ ಆಯ್ಕೆ







