ಯುವ ಸಂಘಟಕ ಶಿವಮೊಗ್ಗದ ಚೇತನ್ಗೆ ಒಲಿದ ಹುದ್ದೆ!
– ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
– ವಿದ್ಯಾರ್ಥಿ ದೆಸೆಯಿಂದಲೇ ಪಕ್ಷಕ್ಕಾಗಿ ಸೇವೆ: ಶುಭಾಶಯಗಳು
NAMMUR EXPRESS NEWS
ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರದ ಕೈಮಗ್ಗ ಹಾಗೂ ಜವಳಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಯುವ ಸಂಘಟಕ ಚೇತನ್ ಗೌಡ ನೇಮಕ ಆಗಿದ್ದಾರೆ. ಕಾಲೇಜು ದಿನಗಳಲ್ಲಿ ಎನ್ ಎಸ್ ಯು ಐ ಸಂಘಟನೆಯಿಂದ ಪ್ರಾರಂಭಿಸಿ, ಯುವ ಕಾಂಗ್ರೆಸ್ ಅಂಗಳದಲ್ಲಿ ಗಟ್ಟಿ ದನಿಯಾಗಿ, ಹೋರಾಟಗಾರನಾಗಿ ಕಾಂಗ್ರೆಸ್ ಪಕ್ಷದ ಯುವ ಸಂಘಟಕನಾಗಿ ಗುರುತಿಸಿಕೊಂಡಿರುವ ಚೇತನ್ ಗೌಡ ಅವರಿಗೆರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಸಿಕ್ಕಿರುವುದು ಅವರ ಶ್ರಮಕ್ಕೆ ಸಿಕ್ಕ ಪ್ರತಿಫಲವಾಗಿದೆ.
ಬಾಕಿ ಉಳಿದಿದ್ದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಲು ಕಾಂಗ್ರೆಸ್ ಪಕ್ಷ ಕೊನೆಗೂ ಮುಂದಾಗಿದೆ. 39 ಮುಖಂಡರು, ಕಾರ್ಯಕರ್ತರನ್ನು ವಿವಿಧ ನಿಗಮ ಮಂಡಳಿಗಳಿಗೆ ನೇಮಕ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಶಿಫಾರಸು ಮಾಡಿದ್ದಾರೆ. ಶಿವಮೊಗ್ಗದ ಯುವ ಕಾಂಗ್ರೆಸ್ ಮುಖಂಡ ಚೇತನ್ ಕೆ.ಗೌಡ ಅವರಿಗೆ ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ.
ಎನ್ಎಸ್ಯುಐ ಜಿಲ್ಲಾಧ್ಯಕ್ಷರಾಗಿ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ಚೇತನ್ ಸಕ್ರಿಯವಾಗಿದ್ದಾರೆ. ಇನ್ನು, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಬೆರಳೆಣಿಗೆ ಮತದಿಂದ ಸೋಲನುಭವಿಸಿದ್ದರು.








