Categories
Uncategorized ಕರಾವಳಿ ಚಿಕ್ಕಮಗಳೂರು ತೀರ್ಥಹಳ್ಳಿ ಮಂಗಳೂರು ಮಲ್ನಾಡ್ ರಾಜ್ಯ ಶಿವಮೊಗ್ಗ

ಒಂದೂವರೆ ವರ್ಷದಿಂದ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ಒಂದೂವರೆ ವರ್ಷದಿಂದ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

* ರೈತರು ಜಮೀನಿಗೆ ನುಗ್ಗಿ ಬೆಳೆಹಾನಿ ಮಾಡುತ್ತಿದ್ದ ಒಂಟಿಸಲಗ
* ಪುಂಡಾನೆ ಸೆರೆಗೆ ಅರಣ್ಯ ಸಚಿವರಿಗೆ ಮನವಿ ಮಾಡಿದ್ದ ಸ್ಥಳೀಯರು

NAMMUR EXPRESS NEWS
ಎನ್‍ ಆರ್‌ ಪುರ: ತಾಲೂಕಿನ ಸುತ್ತಮುತ್ತ ಕಳೆದ ಒಂದೂವರೆ ವರ್ಷದಿಂದ ರೈತರಿಗೆ ಹಾಗೂ ಕಾಡಂಚಿನ ಗ್ರಾಮದ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆಯನ್ನು ಅರಣ್ಯ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಪುಂಡಾನೆ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕಳೆದ ಒಂದೂವರೆ ವರ್ಷದಿಂದ ಉಪಟಳ ನೀಡುತ್ತಿತ್ತು. ವಗಡೆ, ಕಾನೂರು, ಬಾಳೆಹಿತ್ತಲು, ಸಾತ್ವಾನಿ, ಗುಂಡ್ವಾನಿ, ಗುಬ್ಬಿಗಾ, ಹೊರಬೈಲು, ನೇರ್ಲೆ, ಗೋಣಿಕೊಪ್ಪ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಈ ಸಲಗವು ನಿರಂತರವಾಗಿ ಬೆಳೆ ಹಾನಿ ಮಾಡುತ್ತಿತ್ತು. ಇದರಿಂದ ರೈತರ ತೋಟಗಳಿಗೆ ಅಪಾರ ನಷ್ಟ ಉಂಟಾಗಿತ್ತು.
ಗ್ರಾಮಸ್ಥರು ಅರಣ್ಯ ಇಲಾಖೆ ಹಾಗೂ ಶೃಂಗೇರಿ ಕ್ಷೇತ್ರದ ಶಾಸಕರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು. ಸ್ಥಳೀಯರ ಒತ್ತಾಯದ ಮೇರೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆನೆ ಸೆರೆ ಹಿಡಿಯುವಂತೆ ಆದೇಶಿಸಿದ್ದರು. ಹಾಗಾಗಿ ಸಕ್ರೆಬೈಲಿನಿಂದ ಮೂರು ಕುಮ್ಕಿ ಆನೆಗಳು ಹಾಗೂ ಕುಶಾಲನಗರದ ದುಬಾರೆಯಿಂದ ಮೂರು ಆನೆಗಳು ಸೇರಿ ಒಟ್ಟು 6 ಕುಮ್ಕಿ ಆನೆಗಳು ಕಾರ್ಯಾಚರಣೆಗೆ ಆಗಮಿಸಿದ್ದವು. ನಿನ್ನೆ ಅ.6 ರ ಬೆಳಿಗ್ಗೆ ಗುಡ್ಡೆಹಳ್ಳ ಬಳಿ ಅರವಳಿಕೆ ನೀಡಿ ಆನೆಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.
ಕಾರ್ಯಾಚರಣೆ ಸ್ಥಳಕ್ಕೆ ಶಾಸಕ ಟಿ ಡಿ ರಾಜೇಗೌಡ ಭೇಟಿ ನೀಡಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಸಿಬ್ಬಂದಿಗಳಿಗೆ ಅಭಿನಂದಿಸಿದರು.

 

 

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.