Categories
Uncategorized

ಆ.27ರಂದು ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಅಭಿಯಾನ

NAMMUR EXPRESS NEWS
ಶಿವಮೊಗ್ಗ: ಆಗಸ್ಟ್ 27ರಂದು 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಹಾಗೂ 114-ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ(ನಿಧಿಗೆ 2ನೇ ಹೋಬಳಿ) ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡುವ ಬಗ್ಗೆ ವಿಶೇಷ ಅಭಿಯಾನವನ್ನು ಏರ್ಪಡಿಸಲಾಗಿದೆ. ಎಲ್ಲಾ ಅರ್ಹ ಮತದಾರರು ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆಯ ಕಾರ್ಯಕ್ಕಾಗಿ ತಮ್ಮ ವ್ಯಾಪ್ತಿಯ ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ನಿಗಧಿತ ನಮೂನೆ-6ಬಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರೆ ಸ್ವತಃ ಚುನಾವಣಾ ಆಯೋಗದ ಅಧಿಕೃತ ಜಾಲತಾಣ http://www.nvsp.in ಹಾಗೂ ಗೂಗಲ್ ಪ್ಲೇಸ್ಟೋರ್‌ ನಲ್ಲಿ ಲಭ್ಯವಿರುವ http://www.VHAApp ಮೂಲಕ ಆಧಾ‌ರ್ ಜೋಡಣೆಯನ್ನು ಮಾಡಿಕೊಳ್ಳುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಎನ್.ಜೆ.ನಾಗರಾಜ್‌ ಮತದಾರರಲ್ಲಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.