ಕಾರ್ಕಳ: ಸಣ್ಣ ವಿದ್ಯಾರ್ಥಿ ಗಳಿಗೆ ಶಿಕ್ಷಣ ನೀಡಿ ಜೀವನ ರೂಪಿಸುವಲ್ಲಿ ಪೋಷಕರ ಮತ್ತು ಶಿಕ್ಷಕರ ಮಹತ್ವದ ಪಾತ್ರವಿದೆ. ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿ ಮಾಡಬೇಕು. ಎಂದು ಪದ್ಮ ಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಹೇಳಿದರು ಅವರು ಸೋಮವಾರ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ, ೨೦೨೩-೨೪ ನೇ ಶೈಕ್ಷಣಿಕ ಸಾಲಿನ ಪೋಷಕ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ನಾವೆಲ್ಲರೂ ಸಾಮರಸ್ಯದಿಂದ ಬದುಕಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಪೋಷಕರ ಜವಾಬ್ದಾರಿ ಪ್ರಮುಖವಾದುದು ಎಂದು ತಿಳಿಸಿದರು.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿಇಓ ಮತ್ತು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು ಮಾತನಾಡಿ ಪೋಷಕರು ಮಕ್ಕಳ ಪ್ರಗತಿಯನ್ನು ಗಮನಿಸುತ್ತಿರಬೇಕು ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಆಗುವ ದುಷ್ಪರಿಣಾಮಗಳನ್ನು ತಡೆಗಟ್ಟುವುದಕ್ಕೋಸ್ಕರ ಪೋಷಕರು ತಮ್ಮ ಮಕ್ಕಳನ್ನು ಮೊಬೈಲ್ ಬಳಕೆಯಿಂದ ದೂರವಿರಿಸಲು ಸಲಹೆ ನೀಡಿದರು.
ವೇದಿಕೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಪ್ರಾಂಶುಪಾಲೆಯಾದ ಉಷಾ ರಾವ್.ಯು ಮತ್ತು ಉಪಪ್ರಾಂಶುಪಾಲೆಯಾದ ಶ್ರೀಮತಿ ವಾಣಿ.ಕೆ ಉಪಸ್ಥಿತರಿದ್ದರು.
ಶಾಲೆಯ ಪ್ರಾಂಶುಪಾಲೆಯಾದ ಶ್ರೀಮತಿ ಉಷಾ ರಾವ್.ಯು ಅತಿಥಿ ಅಭ್ಯಾಗತರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದೈಹಿಕ ಶಿಕ್ಷಕ ಅರುಣ್ ಕುಮಾರ್ ಗಣ್ಯರನ್ನು ಗೌರವಿಸಿದರು.
ಶಿಕ್ಷಕಿ ಶ್ರೀಮತಿ ಚಂದ್ರಕಲಾ ಕಾರ್ಯಕ್ರಮವನ್ನು ನಿರೂಪಿಸಿದರು. ಉಪಪ್ರಾಂಶುಪಾಲೆಯಾದ ಶ್ರೀಮತಿ ವಾಣಿ.ಕೆ ವಂದಿಸಿದರು