ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ಡಿಕೆಶಿ ಅವರ ಓಡಾಟ ಇಡೀ ಜಿಲ್ಲೆಯಲ್ಲಿ ಮಿಂಚಿನ ಸಂಚಲನ ಮೂಡಿಸಿದೆ. ಮಂಗಳೂರಿಂದ ತೀರ್ಥಹಳ್ಳಿಗೆ ಬಂದಿಳಿದ ಸಿಎಂ ಅವರನ್ನು ಸ್ಥಳೀಯ ನಾಯಕರು ಮತ್ತು ಅಧಿಕಾರಿಗಳು ಸ್ವಾಗತಿಸಿದರು.
ಹೆಲಿಪ್ಯಾಡ್ ಅಲ್ಲೇ ಪತ್ರಿಕಾಗೋಷ್ಠಿ ನಡೆಸಿದ ಸಿಎಂ ತೀರ್ಥಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದರು.
ಬೃಹತ್ ವೇದಿಕೆ… 10 ಸಾವಿರಕ್ಕೂ ಹೆಚ್ಚು ಜನ… ಮಳೆ..!!
ತೀರ್ಥಹಳ್ಳಿ: ಕಸ್ತೂರಿ ರಂಗನ್ ವರದಿ ಕುರಿತ ಸಂವಾದ ಕಾರ್ಯಕ್ರಮಕ್ಕೆ ತೀರ್ಥಹಳ್ಳಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಶನಿವಾರ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸ್ವಾಗತಿಸಿದರು. ನಂತರ ಹೆಲಿಪ್ಯಾಡ್ನಲ್ಲಿ ತಮ್ಮನ್ನು ಸ್ವಾಗತಿಸಿದ ವಿದ್ಯಾರ್ಥಿನಿಯರೊಂದಿಗೆ ಮಾತುಕತೆ ನಡೆಸಿದರು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ ಜೊತೆಗಿದ್ದರು. ತೀರ್ಥಹಳ್ಳಿಯಲ್ಲಿಂದು ‘ಕಸ್ತೂರಿ ರಂಗನ್ ವರದಿ’ ವಿಚಾರವಾಗಿ ಸಾರ್ವಜನಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಹಲವು ಮಹತ್ವದ ವಿಷಯಗಳ ಕುರಿತು ಮಾತನಾಡಿದರು. ಈ ಸಂವಾದ ಕಾರ್ಯಕ್ರಮದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ಸಂಸದರಾದ ಬಿ.ವೈ. ರಾಘವೇಂದ್ರ, ಶಾಸಕರಾದ ಶ್ರೀ ಬೇಳೂರು ಗೋಪಾಲಕೃಷ್ಣ, ಅರಗ ಜ್ಞಾನೇಂದ್ರ, ಶಾರದಾ ಪೂರ್ಯನಾಯ್ಕ್, ಎಸ್.ಎನ್. ಚನ್ನಬಸಪ್ಪ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಂಜುನಾಥ ಗೌಡ, ಭದ್ರಾ ಅಚ್ಚುಕಟ್ಟು ಪ್ರದೇಶ ಪ್ರಾಧಿಕಾರದ ಅಧ್ಯಕ್ಷರಾದ ಅಂಶುಮಂತ್ , ಸೂಡಾ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಿ.ಎ.ಪಿ.ಸಿ.ಎಂ.ಎಸ್ ಅಮೃತ ಮಹೋತ್ಸವದಲ್ಲಿ ಹಾಜರ್
ರೈತರ ಶ್ರಮ, ಸಹಕಾರ ಕ್ಷೇತ್ರದ ಬದ್ಧತೆ ಹಾಗೂ ಜನರ ವಿಶ್ವಾಸದ ಪ್ರತೀಕವಾಗಿ 75 ವರ್ಷಗಳ ಸುದೀರ್ಘ ಪಯಣವನ್ನು ಪೂರ್ಣಗೊಳಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ರೈತರ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ, ನ್ಯಾಯಯುತ ಬೆಲೆ ಹಾಗೂ ಅಗತ್ಯ ಸಹಕಾರ ಒದಗಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಚಿವರಾದ ಮಧು ಬಂಗಾರಪ್ಪ, ಶಾಸಕರಾದಅರಗ ಜ್ಞಾನೇಂದ್ರ, ಬೇಳೂರು ಗೋಪಾಲ ಕೃಷ್ಣ, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ಸಹಕಾರ ನಾಯಕ ಡಾ. ಆರ್. ಎಂ. ಮಂಜುನಾಥ ಗೌಡ, ಸಂಸ್ಥೆಯ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಯೋಗೇಶ್, ರತ್ನಾಕರ್ ಶೆಟ್ಟಿ, ಹುಲ್ಕುಳಿ ಮಹೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಶಿವಮೊಗ್ಗ ಶಾಸಕರ ಅಪಸ್ವರ: ಸಮಾಧಾನ!
ಕಸ್ತೂರಿ ರಂಗನ್ ವರದಿ ಕುರಿತು ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ವಂದೇ ಮಾತರಂ ಹಾಡನ್ನ ಸಂಪೂರ್ಣವಾಗಿ ಹಾಡುವಂತೆ ಗಮನಸೆಳೆದ ಶಾಸಕ ಚೆನ್ನಬಸಪ್ಪ ಅವರ ಮಾತಿಗೆ ವಿರೋಧ ವ್ಯಕ್ತವಾಯಿತು.
ಜೀರೋ ಟ್ರಾಫಿಕ್… ಕಾಂಗ್ರೆಸ್ ನಾಯಕರ ಬಿಡಲಿಲ್ಲ ಎಂಬ ಗಲಾಟೆ
ತೀರ್ಥಹಳ್ಳಿ ಹೆಲಿಪ್ಯಾಡ್ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ
ಸಿಎಂ ಕಾರ್ಯಕ್ರಮಕ್ಕೆ ಒಳಗೆ ಬಿಡಲ್ಲ ಎಂದ ಪೊಲೀಸರ ಜೊತೆಗೆ ವಾಗ್ವಾದ ನಡೆಸಿದ ಘಟನೆ ನಡೆದಿದೆ.







