ತೀರ್ಥಹಳ್ಳಿ: ತೀರ್ಥಹಳ್ಳಿಯ ಐತಿಹಾಸಿಕ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ನಾಡಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿಗಳಿಗೆ ಕಂಚಿನ ಈಶ್ವರ ದೇವರ ವಿಗ್ರಹವನ್ನು ಶ್ರೀ ರಾಮೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೀಡಿ ಗೌರವಿಸಿದೆ.
ಚುನಾವಣೆ ಮುನ್ನ ತೀರ್ಥಹಳ್ಳಿ ಪಟ್ಟಣದ ಆರಾಧ್ಯ ದೈವ ಶ್ರೀ ರಾಮೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದ ಸಿಎಂ ಡಿ.ಕೆ.ಶಿವಕುಮಾರ್ ಕಂಬದ ಗಣೇಶ ಮತ್ತು ರಾಮೇಶ್ವರ ದೇವಾಲಯಕ್ಕೆ ಹರಕೆ ಹೇಳಿಕೊಂಡಿದ್ದರು. ಇದೀಗ ಹರಕೆ ತೀರಿಸಿದ್ದಾರೆ.
ದೇವಸ್ಥಾನದಲ್ಲಿ ಸನ್ಮಾನ: 5 ಕೋಟಿ ರೂ. ಅನುದಾನಕ್ಕೆ ಮನವಿ
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹಾಲಿಗೆ ನಾಗರಾಜ್ ನೇತೃತ್ವದಲ್ಲಿ ವ್ಯವಸ್ಥಾಪನಾ ಸಮಿತಿಯ ಆಡಳಿತ ಮಂಡಳಿಯ ಸದಸ್ಯರು ಶ್ರೀ ರಾಮೇಶ್ವರ ದೇವಾಲಯಕ್ಕೆ ತಳಿರು ತೋರಣಗಳಿಂದ ಸಿಂಗರಿಸಿ ಮಂಗಳವಾದ್ಯ, ಪೂರ್ಣಕುಂಭದೊಂದಿಗೆ ಸಿ ಎಂ ಗೆ ಸ್ವಾಗತ ಮಾಡಿ ದೇವಸ್ಥಾನಕ್ಕೆ ಕರೆತಂದರು.
ಶ್ರೀ ರಾಮೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ.ಶಿವಕುಮಾರ್ ರವರು ಶ್ರೀ ರಾಮೇಶ್ವರನಿಗೆ ಸಿಎಂ ಹೆಸರಲ್ಲಿ ವಿಶೇಷ ಅರ್ಚನೆ ಮಾಡಲಾಯಿತು. ರಾಮೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ದೇವಸ್ಥಾನ ಜೀರ್ಣ ಉದ್ಧಾರಕ್ಕೆ ಸುಮಾರು 5 ಕೋಟಿ ರೂಪಾಯಿಗಳ ಅನುದಾನ ಕೋರಿ ಮನವಿ ಪತ್ರವನ್ನು ಸಲ್ಲಿಸಿ ಕಂಚಿನ ಈಶ್ವರ ದೇವರ ವಿಗ್ರಹ ನೀಡಿ ಶಾಲು ಹೊಂದಿಸಿ ಸನ್ಮಾನಿಸಲಾಯಿತು.
ರಾಮೇಶ್ವರ ನಿತ್ಯ ಅನ್ನದಾಸೋಹ ಸಮಿತಿ ವತಿಯಿಂದ ಗೌರವ
ಸಿಎಂ ಭೇಟಿ ಸಂದರ್ಭದಲ್ಲಿ ರಾಮೇಶ್ವರ ನಿತ್ಯ ಅನ್ನದಾಸೋಹ ಸಮಿತಿ ವತಿಯಿಂದ ಡಾ. ಜೀವಂದರ್ ಜೈನ್ ನೇತೃತ್ವದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ, ಡಾ ಜೀವಂದರ್ ಜೈನ್, ರಾಮೇಶ್ವರ ದೇವರ ವ್ಯವಸ್ಥಾಪನಾ ಸಮಿತಿ ಸದಸ್ಯರು, ರಾಮೇಶ್ವರ ದೇವರ ನಿತ್ಯ ಅನ್ನ ಸಂತರ್ಪಣ ಸಮಿತಿಯ ಸದಸ್ಯರು ದೇವಸ್ಥಾನದ ಪ್ರಧಾನ ಅರ್ಚಕರಾದ ರಾಜಶೇಖರ ಭಟ್, ಮತ್ತು ರಾಕೇಶ್ ಭಟ್, ಹಾಗೂ ಅರ್ಚಕ ವೃಂದ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಒಂದು ಕೋಟಿ ಅನುದಾನ ಮಂಜೂರು ಮಾಡಿದ ಡಿಸಿಎಂ
ಸೆಪ್ಟೆಂಬರ್ 19 ರಂದು ತೀರ್ಥಹಳ್ಳಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀ ಹಾಲಿಗೆ ನಾಗರಾಜ್ ಹಾಗೂ ಸದಸ್ಯರು ಮತ್ತು ಶ್ರೀರಾಮೇಶ್ವರ ಅನ್ನದಾಸೋಹ ಸಮಿತಿಯ ಸದಸ್ಯರು ಹಾಜರಿದ್ದು ಮುಖ್ಯಮಂತ್ರಿಗಳಿಗೆ ಗೌರವ ಸಮರ್ಪಿಸಿದರು. ದೇವಸ್ಥಾನದ ಅಭಿವೃದ್ಧಿಗೆ 5 ಕೋಟಿ ರೂಪಾಯಿಗಳ ಅನುದಾನ ಕಲ್ಪಿಸುವಂತೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಸ್ಥಳದಲ್ಲೇ ಒಂದು ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿ ಅಧಿಕಾರಿಗಳಿಗೆ ಈ ವಿಚಾರವನ್ನು ಫಾಲೊ ಅಪ್ ಮಾಡುವಂತೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿಗೆ ಹಣ ಕಲ್ಪಿಸುವುದಾಗಿ ಸಿಎಂ ಹೇಳಿದರು.
ದೇವಸ್ಥಾನದ ಕೆಲಸಕ್ಕೆ ಅನುದಾನ ಕಲ್ಪಿಸಿದ ಮುಖ್ಯಮಂತ್ರಿಗಳನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಲಿಗೆ ನಾಗರಾಜ್ ಹೃತ್ಪೂರ್ವಕವಾಗಿ ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದ್ದಾರೆ..







