- 669 ಕೋಟಿ ಸಹಾಯಧನ ಬಾಕಿ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಡಬೇಕಾಗಿದ್ದ ಹಣ
- ರೈತರ ಹಣ ನೀಡಲು ಸರ್ಕಾರಕ್ಕೆ ಪತ್ರ
ಬೆಂಗಳೂರು: ಹಾಲು ಪೂರೈಸಿರುವ ರೈತರಿಗೆ 669.59 ಕೋಟಿ ಪ್ರೋತ್ಸಾಹಧನ ಪಾವತಿಯನ್ನು ಕರ್ನಾಟಕ ಹಾಲು ಮಹಾಮಂಡಳಿ ಬಾಕಿ ಇರಿಸಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬುಧವಾರ ಪತ್ರ ಬರೆದಿರುವ ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ, ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಟ್ಟು 669.59 ಕೋಟಿ ಪ್ರೋತ್ಸಾಹಧನ ರೈತರಿಗೆ ಪಾವತಿಯಾಗದೆ, ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ತಕ್ಷಣವೇ ಈ ಬಾಕಿ ಪಾವತಿಗೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.
ಹಾಲು ಪೂರೈಸುತ್ತಿರುವ ಪ್ರತಿ ರೈತರಿಗೆ 5,000ದಿಂದ 30,000ದವರೆಗೂ ಪ್ರೋತ್ಸಾಹಧನ ಬಾಕಿ ಇದೆ. ಕೃಷಿ ಚಟುವಟಿಕೆಗಳು ಆರಂಭವಾಗುತ್ತಿವೆ. ಮಕ್ಕಳಿಗೆ ಶಾಲಾ, ಕಾಲೇಜುಗಳೂ ಆರಂಭವಾಗಿವೆ. ಈ ಸಂದರ್ಭದಲ್ಲಿ ರೈತ ಕುಟುಂಬಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಇದೆ. ರೈತರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.