ಕ್ರೈಸ್ಟ್ ಕಿಂಗ್ ವಿದ್ಯಾರ್ಥಿಗಳಿಗೆ ಅಗ್ನಿಶಮನ ಪ್ರಾತ್ಯಕ್ಷಿಕೆ ಕಾರ್ಯಕ್ರಮ
– ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ಮಾಹಿತಿ
– ಅಗ್ನಿಶಮನ ವಿಧಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು
NAMMUR EXPRESS NEWS
ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಪ್ರಯುಕ್ತ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ ಅಗ್ನಿಶಮನ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಕಳ ಅಗ್ನಿಶಾಮಕ ಠಾಣೆಯ ಅಧಿಕಾರಿ ಅಲ್ಬರ್ಟ್ ಮೋನಿಸ್ ಸಂಪನ್ಮೂಲ ವ್ಯಕ್ತಿಗಳಾಗಿದ್ದು ಅಗ್ನಿಶಮನ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ನಂತರ ಸಂಸ್ಥೆಯ ಹೊರಾವರಣದಲ್ಲಿ ಅಗ್ನಿಶಮನ ಪ್ರಾತ್ಯಕ್ಷಿಕೆ ನಡೆಯಿತು. ಈ ಸಂದರ್ಭದಲ್ಲಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವರ್ಗದವರು, ಸಂಸ್ಥೆಯ ಪ್ರಾಚಾರ್ಯರು ಉಪಸ್ಥಿತರಿದ್ದರು. ನಂತರ ಸೇವಾ ಯೋಜನೆಯ ಸದಸ್ಯರು ಸ್ಥಳೀಯ ಪರಿಸರ ಸ್ವಚ್ಚತಾ ಕಾರ್ಯ ಕೈಗೊಂಡರು. ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ವಾಣಿಜ್ಯಶಾಸ್ತ ಉಪನ್ಯಾಸಕಿ ಶ್ರೀಮತಿ ಸುಕನ್ಯಾ,ಉಪನ್ಯಾಸಕ ದೀಪಕ್ ಕಾರ್ಯಕ್ರಮ ಸಂಘಟಿಸಿದ್ದರು.








