- ಶೀಘ್ರ ಗೌರವಧನ ಹೆಚ್ಚಳ ಮಾಡಲು ಸರ್ಕಾರದ ಹೆಜ್ಜೆ
- ಗೃಹ ಲಕ್ಷ್ಮಿಗೆ ಜು.1 ರಿಂದ 15 ರವರೆಗೆ ಅರ್ಜಿ ಪಡೆಯುವ ಪ್ರಕ್ರಿಯೆ
ಬೆಳಗಾವಿ: ಅಂಗನವಾಡಿ ಕಾರ್ಯಕರ್ತರ ಗೌರವಧನ ಹೆಚ್ಚಳ ಕುರಿತು ಚರ್ಚೆ ನಡೆಸಿ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ.
ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಕುರಿತು ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಕಾಂಗ್ರೆಸ್ ಪಕ್ಷ ಕೊಟ್ಟ ಭರವಸೆಗಳನ್ನು ಈಡೇರಿಸಲಿದೆ.ಅಲ್ಲಿಯವರೆಗೆ ಸ್ವಲ್ಪ ತಾಳ್ಮೆ ಬೇಕು ಎಂದು ಹೇಳಿದ್ದಾರೆ.
ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಕರೆಯಲು ಅಧಿಕಾರಿಗಳ ಜೊತೆಗೆ ಚರ್ಚನಡೆಸಿದ್ದೇವೆ.ಜು.1 ರಿಂದ 15 ರವರೆಗೆ ಅರ್ಜಿ ಪಡೆಯುವ ಪ್ರಕ್ರಿಯೆ ನಡೆಯಲಿದೆ. ಫಲಾನುಭವಿಗಳ ಬ್ಯಾಂಕ್ ಖಾತೆ, ಆಧಾರ್ ಸಂಖ್ಯೆ ಜೋಡಣೆ ಮಾಡುವುದು, ಕುಟುಂಬದ ಮುಖ್ಯಸ್ಥೆಯನ್ನು ಖಚಿತಪಡಿಸಿಕೊಳ್ಳುವ ಕೆಲಸ ನಡೆಯುತ್ತಿದೆ. ಇದಕ್ಕಾಗಿ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.