ಜೂ.14ರವರೆಗೆ ಉಚಿತ: ಆಮೇಲೆ ಅವಕಾಶ ಡೌಟು ಆಧಾರ್ ಕಾರ್ಡ್ ಸರಿ ಮಾಡಲು ಏನೇನು ಬೇಕು.. ಇಲ್ಲಿದೆ ಡೀಟೇಲ್ಸ್
ಬೆಂಗಳೂರು: ಸಾರ್ವಜನಿಕರ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಲು ಜೂ.14, 2023ರವರೆಗೆ ಅವಕಾಶ ನೀಡಲಾಗಿದೆ. ಆಧಾರ್ ಕಾರ್ಡಲ್ಲಿ ಹೆಸರು, ಫೋಟೋ, ಮೊಬೈಲ್ ಸಂಖ್ಯೆಯಂತಹ ಯಾವುದೇ ಮಾಹಿತಿಯನ್ನು ಅಪ್ಡೇಟ್ ಮಾಡಲು 50 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಆದರೆ, ಪ್ರಸ್ತುತ UIDAI ಈ ಎಲ್ಲ ತಿದ್ದುಪಡಿ ಸೇವೆಗಳನ್ನು ಜೂನ್ 14ರವರೆಗೆ ಉಚಿತವಾಗಿ ನೀಡಲಿದೆ.ಮೈ ಆಧಾರ್ ಪೋರ್ಟಲ್ಲಿ ಭೇಟಿ ನೀಡಿ ಆನೈನ್ ಮೂಲಕ ಅಪ್ಲೇಟ್ ಮಾಡಿದರೆ ಯಾವುದೇ ಶುಲ್ಕ ಇರುವುದಿಲ್ಲ. https://myaadhaar.uidai.gov.in ಗೆ ಭೇಟಿ ವಿಳಾಸವನ್ನು ನವೀಕರಿಸಬಹುದು.ನಂತರ ನಿಮ್ಮ ರಿಜಿಸ್ಟರ್ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ, ಅದನ್ನು ನಮೂದಿಸಿ. ಬಳಿಕ, ಡಾಕ್ಯುಮೆಂಟ್ ಅಪ್ಡೇಟ್ ಆಯ್ಕೆಯನ್ನು ಆಯ್ಕೆ ಮಾಡಿ ಮತ್ತು ಅದರ ನಂತರ ಸ್ಟೀನ್ನಲ್ಲಿ ವಿಳಾಸ ಕಾಣಿಸಿಕೊಳ್ಳುತ್ತದೆ.ಇದರ ನಂತರ ಆಧಾರ್ ಕಾರ್ಡ್ ಹೊಂದಿರುವವರು ತಮ್ಮ ವಿವರಗಳನ್ನು ಪರಿಶೀಲಿಸಿ. ಇದು ಸರಿಯಾಗಿದ್ದರೆ, ನೀವು ಮುಂದಿನ ಲಿಂಕ್ ಅನ್ನು ಒತ್ತಿ , ನೀವು ವಿಳಾಸ ಹಾಗೂ ನಿಮ್ಮ ಹೆಸರು, ದಾಖಲೆಯನ್ನು ಸಲ್ಲಿಸಬೇಕು.ಎಲ್ಲಾ ಮಾಹಿತಿಯನ್ನು ನೀಡಿದ ನಂತರ, ಸಲ್ಲಿಸು ಬಟನ್ ಮೇಲೆ ಒತ್ತಬೇಕು. 2023 ಜೂನ್ 14 ರವರೆಗೆ ಉಚಿತ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಲು ಅವಕಾಶ ನೀಡಲಾಗಿದೆ.