ಸೆ.24ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಮಹಾಸಭೆ!
– ಪ್ರತಿಭಾ ಪುರಸ್ಕಾರ-ಸನ್ಮಾನ ಕಾರ್ಯಕ್ರಮ: ಸರ್ವರಿಗೂ ಸ್ವಾಗತ
– ರಾಜ್ಯದ ಮೂಲೆ ಮೂಲೆಯಿಂದ ತೀರ್ಥಹಳ್ಳಿಗೆ ಶಿಕ್ಷಕರ ಆಗಮನ
NAMMUR EXPRESS NEWS
ತೀರ್ಥಹಳ್ಳಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರಿ ಸಂಘದಿಂದ ಸೆ. 24ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಟಿಎಸ್ಟಿ ಕನ್ವೆನ್ನನ್ ಹಾಲ್ ಶಿಕ್ಷಕರ ಸೌಹಾರ್ದ ಭವನದಲ್ಲಿ 11ನೇ ಮಹಾಸಭೆ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಭೆಯನ್ನು ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಆರಗ ಜ್ಞಾನೇಂದ್ರ, ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ವಿದ್ಯಾಧರ್, ಕ.ರಾ.ಸೌ.ಸಂ.ಸ.ನಿ ಉಪಾಧ್ಯಕ್ಷ ಪ್ರಸನ್ನಕುಮಾರ್ ಎ.ಆರ್., ಮ್ಯಾಮ್ ಕೋಸ್ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ,ಸಹ್ಯಾದ್ರಿ ವಿವಿಧೋದ್ದೇಶ ಸಹಕಾರಿಯ ಅಧ್ಯಕ್ಷ ಹೆಚ್.ಎನ್. ವಿಜಯದೇವ್, ಪ.ಪಂ.ಅಧ್ಯಕ್ಷ ರೆಹಮತ್ ಉಲ್ಲಾ ಅಸಾದಿ, ಉಪಾಧ್ಯಕ್ಷೆ ಗೀತಾ ರಮೇಶ್, ಕ.ರಾ.ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಚಂದ್ರಶೇಖರ್ ನುಗ್ಗಲಿ, ಬೆಂಗಳೂರು ಕ.ರಾ. ಪ್ರಾ.ಶಾ.ಶಿ. ಸಂಘದ ಪ್ರಧಾನ ಕಾರ್ಯದರ್ಶಿ ಚೇತನ್ ಹೆಚ್.ಎಸ್., ಶಾ.ಶಿ.ಇಲಾಖೆ ಉಪನಿರ್ದೇಶಕರಾದ ಎಸ್.ಆರ್.ಮಂಜುನಾಥ್, ಕೃಷ್ಣಮೂರ್ತಿ ಹೆಚ್.ಆರ್., ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್, ನಾಗೇಂದ್ರಪ್ಪ, ಗಣೇಶ್ ವೈ., ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಘವೇಂದ್ರ ಎಸ್. ಪಾಲ್ಗೊಳ್ಳುವರು. ಕ.ರಾ.ಪ್ರಾ.ಶಾ.ಶಿ.ಸಂಘ ಸಹಕಾರಿ ನಿ., ತೀರ್ಥಹಳ್ಳಿಯ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ಅಧ್ಯಕ್ಷತೆ ವಹಿಸುವರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎಲ್ಲಾ ಜಿಲ್ಲೆಯ ಹಾಗೂ ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿರುವರು.
ಸಮಾರಂಭಕ್ಕೆ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸ್ವಾಗತಿಸಿದ್ದಾರೆ.








