ಬೆಂಗಳೂರು : ಇತ್ತೀಚಿನ ದಿನಗಳು ಎಲ್ಲಾ ವಸ್ತುಗಳ ಬೆಲೆ ಏರಿಕೆಯ ನಡುವೆ ತರಕಾರಿ ಬೆಲೆ ಹಾಗೂ ಇದೀಗ ಅಕ್ಕಿ ಬೆಲೆಯೂ ಹೆಚ್ಚಳವಾಗಿದೆ.
ವಿವಿಧ ತಳಿಯ ಅಕ್ಕಿ ದರದಲ್ಲಿ ಕೆ.ಜಿಗೆ 10 ರಿಂದ 20 ರೂಪಾಯಿವರೆಗೆ ಏರಿಕೆಯಾಗಿದ್ದು, ಇದರಿಂದ ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ ಬಿದ್ದಂತಾಗಿದೆ.
ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದ್ದು, ಪೂರೈಕೆ ಕಡಿಮೆಯಾಗಿದೆ. ಇದರ ಜೊತೆಗೆ ವಿವಿಧ ದೇಶಗಳಿಗೆ ಅಕ್ಕಿ ರಫ್ತು ಮಾಡಲು ಕೇಂದ್ರ ಸರ್ಕಾರ ಅವಕಾಶ ನೀಡಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಲಭ್ಯತೆ ಕಡಿಮೆಯಾಗಿದೆ. ಅಲ್ಲದೆ ಮಳೆ ಇಲ್ಲದೆ ಬೆಳೆ ಖೋತಾ ಆಗಿದೆ. ಇದೇ ಕಾರಣದಿಂದ ಬೆಲೆ ಏರಿಕೆಯಾಗುತ್ತಿದೆ ಎಂದು ಸ್ಥಳೀಯ ವ್ಯಾಪಾರಿಗಳು ತಿಳಿಸಿದ್ದಾರೆ.
ಮತ್ತಷ್ಟು ದರ ಏರಿಕೆ..?
ಇನ್ನೂ ಹೊಸ ಅಕ್ಕಿ ಬೆಳೆ ನವೆಂಬರ್ – ಡಿಸೆಂಬರ್ ವೇಳೆಗೆ ಮಾರುಕಟ್ಟೆಗೆ ಬರುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಅಕ್ಕಿ ಕೊರತೆ ಮುಂದುವರಿಯುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ದರ ಮತ್ತಷ್ಟು ಏರಿಕೆಯಾಗುವ ಆತಂಕ ಎದುರಾಗಿದೆ.
ಅಕ್ಕಿಯ ಬೆಲೆ 75 ರಿಂದ 100 ರೂ ಏರಿಕೆ, ಸಾಮಾನ್ಯ ಅಕ್ಕಿ 70 ಇರುವುದು 80 ಆಗಿದೆ. ಲಾಸ್ಟ್ ಕ್ವಾಲಿಟಿಯ ಅಕ್ಕಿಗಳು 60 ರೂ ಆಗಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ಜನರು, ಅಕ್ಕಿ ದರ ಹೆಚ್ಚಳದಿಂದ ಮತ್ತಷ್ಟು ತೊಂದರೆ ಅನುಭವಿಸುವಂತಾಗಿದೆ.
ದಿನನಿತ್ಯದ ಖರ್ಚು ನಿಭಾಯಿಸುವುದೇ ಸವಾಲಾಗಿದೆ. ಇದರ ಜೊತೆಗೆ ತರಕಾರಿ ಬೆಲೆ ಕೂಡ ಏರಿಕೆಯಾಗಿದೆ. ಮಳೆಯ ಕೊರತೆಯಿಂದ ತರಕಾರಿ ಬೆಲೆ ಕೂಡ ಏರಿಕೆಯಾಗಿದೆ.







