Categories
Uncategorized ಮಂಗಳೂರು

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಸಫ್ವಾನ್ ಗ್ಯಾಂಗ್ – ಎಂಟು ಜನರ ಬಂಧನ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಸಫ್ವಾನ್ ಗ್ಯಾಂಗ್ – ಎಂಟು ಜನರ ಬಂಧನ

* ಸುಹಾಸ್ ಹತ್ಯೆಗೆ ಕಾಂಟ್ರಾಕ್ಟ್ ಕಿಲ್ಲರ್ಸ್ ಬಳಸಿದ ಮಾಹಿತಿ
* ಕಾಫಿನಾಡಿನ ಇಬ್ಬರು ಯುವಕರು ಈ ಗ್ಯಾಂಗ್‌ನಲ್ಲಿ ಭಾಗಿ

NAMMMUR EXPRESS NEWS
ಮಂಗಳೂರು : ಹಿಂದೂ ಕಾರ್ಯಕರ್ತ ಬಜ್ಪೆ ಸುಹಾಸ್‌ ಶೆಟ್ಟಿಯ ಬರ್ಬರ ಹತ್ಯೆ ಸಂಬಂಧ ಹಲವು ಮಾಹಿತಿಗಳನ್ನು ಕಲೆಹಾಕಿದ ಪೊಲೀಸರು ಎಂಟು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಕೆಲ ದಿನಗಳಿಂದಲೇ ಆತನ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಸತ್ಯಾಂಶ ಬಯಲಾಗಿದೆ. ಹತ್ಯೆಗೆ ಕಾಂಟ್ರಾಕ್ಟ್ ಕಿಲ್ಲರ್ಸ್ ಬಳಸಿ ಈ ದಾಳಿ ನಡೆಸಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ.
ವಿಡಿಯೋ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳ ಕುರಿತಂತೆ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಆದರೆ, ಪೊಲೀಸರು ವಶಕ್ಕೆ ಪಡೆದಿರುವ 8 ಆರೋಪಿಗಳ ಪೈಕಿ ಇಬ್ಬರು ಹಿಂದೂ ಯುವಕರು ಎಂದು ಹೇಳಲಾಗುತ್ತಿದೆ.

* ಕೊಲೆಯಲ್ಲಿ ಕಾಫಿನಾಡಿನ ಹಿಂದೂ ಯುವಕರು ಭಾಗಿ
ಹಿಂದೂ ಕಾರ್ಯಕರ್ತನ ಭೀಕರ ಕೊಲೆ ಪ್ರಕರಣದಲ್ಲಿ ಹಿಂದೂ ಯುವಕರನ್ನೇ ಬಳಸಲಾಗಿದೆ ಅನ್ನೋ ಸ್ಫೋಟಕ ಮಾಹಿತಿ ಇದೀಗ ಬಯಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ಇಬ್ಬರು ಹಿಂದೂ ಯವಕರು ಮಂಗಳೂರಿನ ನಟೋರಿಯಸ್ ಸಫ್ವಾನ್ ಗ್ಯಾಂಗ್ ಜೊತೆ ಸೇರಿಕೊಂಡಿದ್ದರು. ಇದೀಗ ಸಫ್ವಾನ್ ಗ್ಯಾಂಗ್‌ ಜೊತೆಗಿದ್ದ ಇಬ್ಬರು ಹಿಂದೂ ಯುವಕರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

* ಕಮಿಷನ‌ರ್ ಅಧಿಕೃತ ಘೋಷಣೆ ಸಾಧ್ಯತೆ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಕಾರ್ಯಪ್ರವೃತ್ತರಾಗಿದ್ದ ಪೊಲಿಸರು 8 ಆರೋಪಿಗಳ ವಿಚಾರಣೆ ತೀವ್ರಗೊಳಿಸಿದ್ದಾರೆ. ವಶಕ್ಕೆ ಪಡೆದಿರುವ ಕೆಲ ಆರೋಪಿಗಳು ದಕ್ಷಿಣ ಕನ್ನಡದಲ್ಲೇ ಅವಿತು ಕುಳಿತಿದ್ದರು. ಆರೋಪಿಗಳ ವಶಕ್ಕೆ ಪಡೆದಿರುವ ಕುರಿತು ಇಂದು ಮಂಗಳೂರು ಕಮಿಷನರ್‌ ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.