ಟಾಪ್ ನ್ಯೂಸ್ ಕರಾವಳಿ
ಕಾರಿನಲ್ಲಿ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವು!
– ಮಣಿಪಾಲದಲ್ಲಿ ಚಿಕ್ಕಮಗಳೂರು ಮೂಲದ ವ್ಯಕ್ತಿ ಸಾವು
– ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ಕಳ್ಳತನ
– ಕರಾವಳಿಯ ಮೂವರನ್ನು ವಿದೇಶದಲ್ಲಿ ಮೂವರನ್ನು ಕೂಡಿಟ್ಟು ಆನ್ಲೈನ್ ವಂಚನೆ ದಂಧೆ
NAMMUR EXPRESS NEWS
ಮಣಿಪಾಲ: ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ.
ಚಿಕ್ಕಮಗಳೂರು ಮೂಲದ ಆನಂದ (37) ಸಾವನ್ನಪ್ಪಿರುವವರು. ಇವರು ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿದ ಕಾರಿನಲ್ಲಿ ರಾತ್ರಿ ಮಲಗಿಕೊಂಡಿದ್ದರು.ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ಕಳ್ಳತನ!
ಕುಂದಾಪುರ: ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ನುಗ್ಗಿ ಸಾವಿರರೂ ರೂ. ನಗದು ಕಳ್ಳತನ ಮಾಡಿರುವ ಬಗ್ಗೆ ಆ. 17 ರಂದು ಶನಿವಾರ ಬಳಿಗ್ಗೆ ೆಳಕಿಗೆ ಬಂದಿದೆ.
ಇತ್ತೀಚಿಗೆ 7 ಕೋಟಿ ವೆಚ್ಚದಲ್ಲಿ ಜೀರ್ಣೋದ್ದಾರಗೊಂಡಿದ್ದ ಈ ದೇವಸ್ಥಾನದಲ್ಲಿ ಅಂದಾಜು ಸುಮಾರು 40 ಸಾವಿರಕ್ಕೂ ಅಧಿಕ ನಗದು ಕಳ್ಳತನ ಆಗಿದೆ ಎಂದು ತಿಳಿದು ಬಂದಿದೆ.
ಬಾಗಿಲ ಚಿಲಕದ ಸ್ಕೂ ತೆಗೆದು ಸುತ್ತು ಪೌಳಿ ಪ್ರವೇಶಿಸಿದ ಕಳ್ಳ, ತಿಂಗಳ ಸತ್ಯನಾರಾಯಣ ಪೂಜೆಗಾಗಿ ಸಂಗ್ರಹಿಸಿದ ಹಣವನ್ನು ಎಗರಿಸಿದ್ದಾನೆ.
ಚಪ್ಪಲಿ ಹಾಕಿಕೊಂಡೆ ಕೈ ಮುಗಿದು ಬಳಿಕ ಕಳ್ಳತನ ಕೃತ್ಯ ನಡೆಸಿದ್ದು, ಕಾಣಿಕೆ ಡಬ್ಬಿ ಒಡೆದು ಹಣ ಎಗರಿಸಿದ ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ವಿದೇಶದಲ್ಲಿ ಮೂವರನ್ನು ಕೂಡಿಟ್ಟು ಆನ್ಲೈನ್ ವಂಚನೆ ದಂಧೆ
ಕಂಪೆನಿಗಳಲ್ಲಿ ಉದ್ಯೋಗವಿದೆ ಎಂದು ಭಾರತೀಯ ಸಮುದಾಯದ ಉದ್ಯೋಗಾಕಾಂಕ್ಷಿಗಳನ್ನೇ ಟಾರ್ಗೆಟ್ ಮಾಡಿ ಬಲೆ ಬೀಸುವ ಕಾಂಬೋಡಿಯಾದ ಸೈಬರ್ ಅಪರಾಧಿಗಳು ಭಾರತೀಯರನ್ನು ಬಳಸಿಕೊಂಡು ಭಾರತೀಯರನ್ನೇ ದೋಚುತ್ತಿದ್ದು, ಇದೀಗ ಈ ವಂಚನೆಯ ಜಾಲವನ್ನು ವಿದೇಶಾಂಗ ಇಲಾಖೆ ಪತ್ತೆ ಹಚ್ಚಿದೆ. ಜೊತೆಗೆ ಭಾರತದ ಸುಮಾರು 250 ಮಂದಿಯನ್ನು ರಕ್ಷಣೆ ಮಾಡಿದ್ದು ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದ್ದಾರೆ ಎಂದು ತಿಳಿದುಬಂದಿದೆ.
ದ.ಕ. ಮೂಲದ ಈ ಮೂವರು ಕೆಲ ತಿಂಗಳುಗಳ ಹಿಂದೆ ಆಂಧ್ರಪ್ರದೇಶದ ಏಜೆಂಟ್ ಓರ್ವನ ಮೂಲಕ ವಿದೇಶದ ಉದ್ಯೋಗದ ಆಸೆಯಿಂದ ಕಾಂಬೋಡಿಯಾಕ್ಕೆ ತೆರಳಿದ್ದರು. ಅಲ್ಲಿ ಐಟಿ ಕಂಪೆನಿಯ ಉದ್ಯೋಗವಿದೆ ಎಂದು ಕಳುಹಿಸಿದ್ದು ಸೈಬರ್ ವಂಚಕರ ಬಳಿ. ಅಲ್ಲಿ ತಲುಪುತ್ತಿದ್ದಂತೆ ಪಾಸ್ಪೋರ್ಟ್ ಕಿತ್ತುಕೊಂಡು, ದಿನದ 12 ಗಂಟೆ ಕಾಲ ಗುಲಾಮರಂತೆ ದುಡಿಸಿಕೊಳ್ಳುತ್ತಿದ್ದರು.
ಫೇಸ್ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಂಗಳಲ್ಲಿ ಹುಡುಗಿಯ ಹೆಸರಿನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸುವುದು, ೇರು ಮಾರುಕಟ್ಟೆ, ಕ್ರಿಪ್ಟೋದಲ್ಲಿ ಹೂಡಿಕೆ ನೆಪದಲ್ಲಿ ಭಾರತೀಯರಿಗೆ ಕರೆ ಮಾಡಿ ವಂಚಿಸುವ ಕೆಲಸಗಳನ್ನು ಮಾಡಿಸಲಾಗುತ್ತಿತ್ತು. ದಿನಕ್ಕೆ ಇಷ್ಟು ಲಕ್ಷವನ್ನು ಸಂಗ್ರಹಿಸಿ ಕೊಡುವಂತೆ ಹಿಂಸಿಸಲಾಗುತ್ತಿತ್ತು.ಕೆಲವೊಮ್ಮೆ ಆ ಹಣದಲ್ಲಿ ಸ್ವಲ್ಪ ನೀಡುತ್ತಿದ್ದರು. ಭಾರತಕ್ಕೆ ತಲುಪಿರುವ ದಕ್ಷಿಣ ಕನ್ನಡ ಜಿಲ್ಲೆಯ ಸ್ಟೀವನ್ ತಿಳಿಸಿದ್ದಾರೆ.
ಕಳೆದ ವರ್ಷದ ಕೊನೆಯಲ್ಲಿ ಕೇಂದ್ರ ಸರ್ಕಾರದ ಹಿರಿಯ ಉದ್ಯೋಗಿಯೊಬ್ಬರು ತಮಗೆ 67 ಲಕ್ಷ ರೂ. ಅಧಿಕ ಹಣ ವಂಚನೆಯಾಗಿರುವುದಾಗಿ ಆರೋಪಿಸಿ ದೂರು ದಾಖಲಿಸಿದ್ದಾಗ ಈ ಹಗರಣದ ಕುರಿತು ಪೊಲೀಸರಿಗೆ ಮಾಹಿತಿ ಹೊರಬಂದಿತ್ತು. ಒಡಿಶಾದ ರೂರ್ಕೆಲಾ ಪೊಲೀಸರು ಕಳೆದ ಡಿಸೆಂಬರ್ 30 ರಂದು ಸೈಬರ್ ಕ್ರೈಮ್ ಸಿಂಡಿಕೇಟ್ ಅನ್ನು ಭೇದಿಸಿದಾಗ ಕೆಲವರು ಜನರನ್ನು ಕಾಂಬೋಡಿಯಾಕ್ಕೆ ಅಕ್ರಮವಾಗಿ ರವಾನಿಸುವ ಕೆಲಸದಲ್ಲಿ ತೊಡಗಿರುವುದು ಬೆಳಕಿಗೆ ಬಂದಿತ್ತು. ಈ ಮಾಹಿತಿಯನ್ನು ಪೊಲೀಸರು ಭಾರತೀಯ ವಿದೇಶಾಂಗ ಇಲಾಖೆ ಜತೆ ಹಂಚಿಕೊಂಡಿದ್ದರು.
ಉದ್ಯೋಗಕ್ಕಾಗಿ ಕಾಂಬೋಡಿಯಾಗೆ ಪ್ರಯಾಣಿಸುವವರು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಅನುಮೋದಿಸಿದ ಅಧಿಕೃತ ಏಜೆಂಟರ ಮೂಲಕ ಮಾತ್ರ ಉದ್ಯೋಗ ಪಡೆದುಕೊಳ್ಳಬೇಕು ಎಂದು ಈ ವರ್ಷದ ಆರಂಭದಲ್ಲಿ ಭಾರತೀಯ ರಾಯಭಾರ ಕಚೇರಿ ಸಲಹೆ ನೀಡಿದೆ.