ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ವರ್ಗಾವಣೆ
– ಹೊಸ ನಗರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆ
– ತೀರ್ಥಹಳ್ಳಿಯನ್ನು ರಾಜ್ಯ ಮಟ್ಟದಲ್ಲಿ ಗುರುತಿಸಿದ್ದ ಅಧಿಕಾರಿ
NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೊಸನಗರ ಶಿಕ್ಷಣ ಅಧಿಕಾರಿಯಾಗಿ ವರ್ಗಾವಣೆ ಆಗಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ ಅಧಿಕಾರಿಯಾದ ಗಣೇಶ್ ವೈ, ಕ್ಷೇತ್ರ ಶಿಕ್ಷಣಾಧಿಕಾರಿ, ತೀರ್ಥಹಳ್ಳಿ, ಶಿವಮೊಗ್ಗ ಜಿಲ್ಲೆ ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ, ಹೊಸನಗರ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ಇಲ್ಲಿನ ಖಾಲಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ಆದೇಶಿಸಿದೆ.
ತೀರ್ಥಹಳ್ಳಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಗಣೇಶ್ ಅವರು ಈ ಹಿಂದಿನ ಅವಧಿಯಲ್ಲಿ ರಾಜ್ಯಕ್ಕೆ ನಂ. 1 ಸ್ಥಾನಕ್ಕೆ ಬರಲು ಕಾರಣರಾಗಿದ್ದರು. ಇನ್ನು ತೀರ್ಥಹಳ್ಳಿಗೆ ಹೊಸಬರ ನೇಮಕ ಆಗಿಲ್ಲ.
ಕಳೆದ 2 ವರ್ಷದಿಂದ ತೀರ್ಥಹಳ್ಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರಿಗೆ ಬೀಳ್ಕೊಡುಗೆ ಮಾಡಲು ತಯಾರಿ ನಡೆದಿದೆ.








