Categories
Uncategorized ಉಡುಪಿ ಕರಾವಳಿ ಚಿಕ್ಕಮಗಳೂರು ತೀರ್ಥಹಳ್ಳಿ ಬೆಂಗಳೂರು ಮಂಗಳೂರು ಮಲ್ನಾಡ್ ರಾಜ್ಯ ಶಿವಮೊಗ್ಗ ಸಿನಿಮಾ

ಎಂಗೇಜ್ ಆದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾಮಂದಣ್ಣ

ಎಂಗೇಜ್ ಆದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾಮಂದಣ್ಣ

* ಕೇವಲ ಎರಡು ಕುಟುಂಬದ ಸದಸ್ಯರಷ್ಟೇ ಭಾಗಿ
* ವಿಜಯ್ ಮನೆಯಲ್ಲಿ ನಡೆದ ಎಂಗೇಜ್‌ಮೆಂಟ್,ಫೆಬ್ರವರಿಯಲ್ಲಿ ಮದುವೆ ?

 

NAMMMUR EXPRESS NEWS
ಚೆನ್ನೈ: ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ ದೇವರಕೊಂಡ ಅವರ ಮನೆಯಲ್ಲಿ ಎಂಗೇಜ್ಮೆಂಟ್​ ಸಮಾರಂಭ ಅದ್ಧೂರಿಯಾಗಿ ಮಾಡಲಾಗಿದ್ದು ಇದರಲ್ಲಿ ಎರಡು ಕಡೆಯ ಕುಟುಂಬದ ಹಿರಿಯರು, ಸಂಬಂಧಿಕರು ಮತ್ತು ಆಪ್ತ ಸ್ನೇಹಿತರು ಮಾತ್ರ ಭಾಗಿಯಾಗಿದ್ದರು ಎನ್ನಲಾಗಿದೆ.
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ನಿಶ್ಚಿತಾರ್ಥ ಸಮಾರಂಭದಲ್ಲಿ ಕೇವಲ 2 ಕಡೆಯ ಕುಟುಂಬ ಸದಸ್ಯರು ಮತ್ತು ಕೆಲವು ಆಪ್ತರು ಮಾತ್ರ ಭಾಗವಹಿಸಿದ್ದರು. ಮುಂದಿನ ವರ್ಷ ಅಂದರೆ 2026ರ ಫೆಬ್ರವರಿಯಲ್ಲಿ ವಿವಾಹ ನಡೆಯಲಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಗೀತ ಗೋವಿಂದಂ ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಅಂದಿನಿಂದ, ಅವರ ನಡುವೆ ಉತ್ತಮ ಸಂಬಂಧ ಬೆಳೆದಿದೆ. ಇದಾದ ಮೇಲೆ ಇಬ್ಬರ ನಡುವೆ ಪ್ರೀತಿ ಹುಟ್ಟಿದೆ ಎನ್ನಲಾಗಿದೆ. ಆ ಮೇಲೆ ಡಿಯರ್ ಕಾಮ್ರೇಡ್ ಮೂವಿಯಲ್ಲಿ ಒಟ್ಟಿಗೆ ನಟಿಸಿದ್ದರು.

 

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದು ಇಬ್ಬರ ಹಲವಾರು ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಸದ್ಯ ರಶ್ಮಿಕಾ ಮಂದಣ್ಣ ಬಾಲಿವುಡ್​ನಲ್ಲೂ ಫುಲ್ ಮಿಂಚುತ್ತಿದ್ದಾರೆ. ಇತ್ತೀಚೆಗೆ ವಿಜಯ್ ಕಿಂಗ್ಡಮ್ ಮೂವಿ ಮೂಲಕ ಮತ್ತೊಂದು ಹಿಟ್ ಗಳಿಸಿದ್ದಾರೆ. ರಶ್ಮಿಕಾ ಹಾಗೂ ದೇವರಕೊಂಡ ಇಬ್ಬರೂ ಸಾಲು ಸಾಲು ಸಿನಿಮಾಗಳಲ್ಲಿ ಫುಲ್ ಬ್ಯುಸಿ ಇದ್ದು ಇದರ ನಡುವೆ 2026ರ ಫೆಬ್ರುವರಿಯಲ್ಲಿ ವಿವಾಹ ಆಗುತ್ತಾರೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.