ಬೆಂಗಳೂರು: 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಜುಲೈ ಆವೃತ್ತಿಯ ಯುಜಿಸಿ ಅನುಮೋದಿತ ಹಾಗೂ ನ್ಯಾಕ್ ಎ+ ಮಾನ್ಯತೆಯೊಂದಿಗೆ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಆನ್ ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸ್ನಾತಕ/ಸ್ನಾತಕೋತ್ತರ ಪದವಿಗಳಾದ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಸಿಎ, ಬಿಎಸ್ ಡಬ್ಲ್ಯೂ, ಬಿಲಿಬ್, ಐಎಸಿ, ಎಂಎ, ಎಂಕಾಂ, ಎಂಬಿಎ, ಎಂಸಿಎ, ಎಂಎಸ್ಸಿ, ಎಂಎಸ್ ಡಬ್ಲ್ಯೂ, ಎಂಲಿಬ್, ಐಎಸ್ ಸಿ, ಪಿಜಿ ಡಿಪ್ಲೋಮಾ ಮತ್ತು ಪ್ರಮಾಣ ಪತ್ರ ಕಾರ್ಯಕ್ರಮಗಳಿಗೆ ಪ್ರವೇಶಾತಿ ಈಗಾಗಲೇ ಆರಂಭಗೊಂಡಿದೆ.
ಅರ್ಜಿಯನ್ನು ಸಲ್ಲಿಸಲು 2026ರ ಅಕ್ಟೋಬರ್ 13 ಅಂತಿಮ ದಿನವಾಗಿದ್ದು, ಪ್ರವೇಶಾತಿಯನ್ನು ಬಯಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ ನಲ್ಲಿ ಆನ್ ಲೈನ್ ದಾಖಲಾತಿ ಪೋರ್ಟಲ್ ಮೂಲಕ ಪ್ರವೇಶಾತಿ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ರಾಮನಗರ ಪ್ರಾದೇಶಿಕ ಕೇಂದ್ರಕ್ಕೆ ಸಲ್ಲಿಸಿ ಪ್ರವೇಶಾತಿಯನ್ನು ಪಡೆಯಲು ಈ ಮೂಲಕ ತಿಳಿಸಲಾಗಿದೆ.
ಆಯಾ ಶಿಕ್ಷಣ ಕ್ರಮಗಳಿಗೆ ವಿಶ್ವವಿದ್ಯಾನಿಲಯವು ಪ್ರವೇಶಾತಿ, ಶುಲ್ಕವನ್ನು ನಿಗದಿಪಡಿಸಿದ್ದು, ಅದಕ್ಕೆ ಸಂಬಂಧಿಸಿದಂತಹ ಮಾಹಿತಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆಯಾ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.







