ಚಿಕ್ಕಮಗಳೂರು: ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ್ದು, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನೂತನ ಸಿಇಒ ಆಗಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿದೆ. ಈ ಹಿಂದೆ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ಅವರ ಈ ನೇಮಕಾತಿಯು, ಪ್ರಸ್ತುತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ನಡೆಯುತ್ತಿರುವುದರಿಂದ ಭಾರತೀಯ ಚುನಾವಣಾ ಆಯೋಗದ ಅನುಮೋದನೆಗೆ ಒಳಪಟ್ಟಿರುತ್ತದೆ. ಚಿಕ್ಕಮಗಳೂರಿನ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೀರ್ತನಾ ಎಚ್.ಎಸ್. ಅವರನ್ನು ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ.
ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಕ್ಷೇತ್ರ ಮಟ್ಟದ ಕಾರ್ಯಾಧ್ಯಕ್ಷರಾಗಿ ಸತೀಶ್ ಅದ್ದಡ ಆಯ್ಕೆ
ಕೊಪ್ಪ: ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಕ್ಷೇತ್ರ ಮಟ್ಟದ ಕಾರ್ಯಾಧ್ಯಕ್ಷರಾಗಿ ಸತೀಶ್ ಅದ್ದಡ ಆಯ್ಕೆ ಆಗಿದ್ದಾರೆ. ಹಿರಿಯ ಬಿಜೆಪಿ ನಾಯಕರು, ಡಿಸಿಸಿ ಬ್ಯಾಂಕ್ ನಿರ್ದೇಶಕರು ಆಗಿರುವ ಸತೀಶ್ ಅವರು
ರೈತರ ಹಕ್ಕುಗಳು ಹಾಗೂ ಬದುಕಿನ ರಕ್ಷಣೆಗಾಗಿ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ನಡೆಸುತ್ತಿರುವ ಹೋರಾಟಕ್ಕೆ ಇನ್ನಷ್ಟು ಬಲ ತುಂಬಲಿದ್ದಾರೆ.
– ಶಂಕಿತರ ಹಿಟ್ ಲಿಸ್ಟ್ನಲ್ಲಿ ಸಿ.ಟಿ. ರವಿ ಹೆಸರು: ಹೆಚ್ಚುವರಿ ಭದ್ರತೆಗೆ ಪಟ್ಟು!
ಚಿಕ್ಕಮಗಳೂರು: ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರರನ್ನು ಚಿಕ್ಕಬಳ್ಳಾಪುರ ಹಾಗೂ ಹಾಸನ ಪೊಲೀಸರು ಬಂಧಿಸಿದ ಬೆನ್ನಲ್ಲೇ, ಪ್ರಮುಖ ಬಿಜೆಪಿ ನಾಯಕರ ಹತ್ಯೆಗೆ ಸ್ಕೆಚ್ ಹಾಕಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ ಎನ್ನಲಾಗಿದ್ದು. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕೃತ ಮನವಿ ಸಲ್ಲಿಸಲಾಗಿದೆ.







