ಶಿವಮೊಗ್ಗ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 2025-26ನೇ ಸಾಲಿನ ಇಂಜಿನಿಯರಿಂಗ್ ರ್ಯಾಂಕ್ ಗಳನ್ನು ಪ್ರಕಟಿಸಿದ್ದು, ಶಿವಮೊಗ್ಗದ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಒಟ್ಟು 8 ರ್ಯಾಂಕ್ ಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಎಲೆಕ್ನಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಧನ್ಯಶ್ರೀ ಬಿ.ಎಂ. ಅವರು ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆಯುವುದರ ಜೊತೆಗೆ 7 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗದಲ್ಲಿ ಹರ್ಷಿಕ ಎನ್. ಅವರು 4ನೇ ರ್ಯಾಂಕ್ ಪಡೆದಿದ್ದಾರೆ. ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ನಯ್ಯರ್ ಫಾತೀಮ ಅಫ್ರಿನ್ 3ನೇ ರ್ಯಾಂಕ್, ಯಶಸ್ಕರ ಟಿ.ಜಿ. 4ನೇ ರ್ಯಾಂಕ್, ಭೂಮಿಕ ಎಂ. 5ನೇ ರ್ಯಾಂಕ್, ಜಾರ್ಜ್ ಟಿ. ಪೌಲ್ 6ನೇ ರ್ಯಾಂಕ್, ನಿತ್ಯಶ್ರೀ ಹೆಗಡೆ ಕೆ.ಎನ್. 8ನೇ ರ್ಯಾಂಕ್ ಹಾಗೂ ಸ್ವಾತಿ ಎಸ್.ಜಿ. 10ನೇ ರ್ಯಾಂಕ್ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯು ಕಾಲೇಜಿನ ಶೈಕ್ಷಣಿಕ ಶ್ರೇಷ್ಠತೆ, ಗುಣಮಟ್ಟದ ಬೋಧನೆ ಹಾಗೂ ವಿದ್ಯಾರ್ಥಿಗಳ ನಿರಂತರ ಪರಿಶ್ರಮಕ್ಕೆ ದೊರೆತ ಮತ್ತೊಂದು ಪ್ರತಿಷ್ಠಿತ ಮನ್ನಣೆಯಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ವೈ. ವಿಜಯಕುಮಾರ್ ತಿಳಿಸಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.







