ಟಾಪ್ ನ್ಯೂಸ್ ಶಿವಮೊಗ್ಗ ತೀರ್ಥಹಳ್ಳಿ ಶಿಕ್ಷಕ ಪೋಕ್ಸೋ ಕೇಸಲ್ಲಿ ಅರೆಸ್ಟ್! – ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಹಿನ್ನೆಲೆ ದೂರು – ಆಯನೂರಿನ ಬಳಿ ಬೇಕರಿಯಲ್ಲಿ ಸ್ಫೋಟ! – ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ: ಮಹಿಳೆಯರ ರಕ್ಷಣೆ NAMMUR EXPRESS NEWS ತೀರ್ಥಹಳ್ಳಿ: ವಿದ್ಯಾರ್ಥಿನಿಯರ ಜೊತೆ ಅಸಭ್ಯ ಹಾಗೂ ಲೈಂಗಿಕ ಕಿರುಕುಳ ಆರೋಪದ ಹಿನ್ನಲೆಯಲ್ಲಿ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ಶಿಕ್ಷಕನ ಮೇಲೆ ಫೋಕ್ಸೋ ಕೇಸ್ ದಾಖಲಾಗಿದೆ. ಸಂಗೀತ ಶಿಕ್ಷಕ ಇಮ್ಮಿಯಾಜ್ (45) ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ಹಾಗೂ ಅನುಚಿತ ರೀತಿಯಲ್ಲಿ ಶಾಲೆಯಲ್ಲಿ ಹಾಗೂ ಪ್ರವಾಸದ ವೇಳೆ ವರ್ತಿಸಿದ್ದ ಎಂಬುದಾಗಿ ವಿದ್ಯಾರ್ಥಿಗಳಿಂದ ವಸತಿ ಶಾಲಾ ಪ್ರಾಂಶುಪಾಲರಿಗೆ ದೂರು ನೀಡಲಾಗಿದೆ. ವಸತಿಶಾಲಾ ಪ್ರಾಂಶುಪಾಲರಿಂದ ಪೊಲೀಸರಿಗೆ ದೂರು ನೀಡಿದ್ದು ತೀರ್ಥಹಳ್ಳಿ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನಲ್ಲಿ ಪ್ರಕರಣದ ಆರೋಪಿ ಇಮ್ಮಿಯಾಜ್ ನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಆಯನೂರಿನ ಬಳಿ ಬೇಕರಿಯಲ್ಲಿ ಸ್ಫೋಟ ಶಿವಮೊಗ್ಗ ತಾಲೂಕಿನ ಆಯನೂರಿನ ಬಳಿ ಇರುವ ಬೇಕರಿ ಒಂದರಲ್ಲಿ ಬೆಂಕಿ ಹತ್ತಿಕೊಂಡು ಧಗ ಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಆಯನೂರಿನ ಹಣಗೆರೆ ರಸ್ತೆಯ ಎಸ್ ಎಲ್ ವಿ ಅಯ್ಯಂಗಾರ್ ಬೇಕರಿಯಲ್ಲಿ ದಿಡೀರ್ ಬೆಂಕಿ ಕಾಣಿಸಿಕೊಂಡು, ಅಂಗಡಿ ಹೊತ್ತಿ ಉರಿದಿದೆ. ಬೆಂಕಿಯ ಜ್ವಾಲೆ ಜಾಸ್ತಿ ಆಗುತ್ತಿದ್ದ ಸಂದರ್ಭದಲ್ಲಿ ಬೇಕರಿ ಒಳಗೆ ಮೂರು ಬಾರಿ ಸ್ಫೋಟಗೊಂಡಿದೆ. ಬೇಕರಿಯಲ್ಲಿರುವ ಸಿಲೆಂಡರ್ ಸ್ಫೋಟಗೊಂಡಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಬೆಂಕಿಯ ಜ್ವಾಲೆ ಅಕ್ಕಪಕ್ಕದ ಅಂಗಡಿಗಳಿಗೂ ಆವರಿಸಿದ್ದು, ಅಕ್ಕ ಪಕ್ಕದ ಅಂಗಡಿಯವರು ಬೆಂಕಿ ಕಾಣಿಸಿಕೊಂಡ ಕೂಡಲೇ ಹೊರಗೆ ಓಡಿ ಬಂದಿದ್ದಾರೆ ಇನ್ನು ಬೇಕರಿಯ ಮುಂಭಾಗದಲ್ಲಿ ಪೆಟ್ರೋಲ್ ಬಂಕ್ ಇರುವ ಕಾರಣ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ: ಮಹಿಳೆಯರ ರಕ್ಷಣೆ ಶಿವಮೊಗ್ಗ: ಸ್ಪಾ ಮತ್ತು ಬಾಡಿ ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತಿದ್ದ ಸ್ಪಾ ಮೇಲೆ ಶಿವಮೊಗ್ಗ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ವೀರಣ್ಣ ಲೇ ಔಟ್ ಮೂರನೇ ತಿರುವಿನಲ್ಲಿರುವ ಲೈರಾ ಮೇಕ್ ಓವರ್ ಸ್ಟುಡಿಯೋ ಸಲೂನ್ ಅಂಡ್ ಸ್ಪಾ ದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಸಂತ್ರಸ್ತೆಯರನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ. ಕೆ ಮಿಥುನ್ ಕುಮಾರ್, ಹೆಚ್ಚುವರಿ ಜಿಲ್ಲಾ ರಕ್ಷಣಾ ಅಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪರವರ ಮಾರ್ಗದರ್ಶನದಲ್ಲಿ, ಡಿವೈಎಸ್ ಪಿ ಸುರೇಶ್ ರವರ ಮೇಲ್ವಿಚಾರಣೆಯಲ್ಲಿ ಇನ್ಸ್ ಪೆಕ್ಟರ್ ಚಂದ್ರಕಲಾ ಮತ್ತು ಭರತ್ ಕುಮಾರ್ ರವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ. ಇಬ್ಬರು ಸಂತ್ರಸ್ಥ ಮಹಿಳೆಯರನ್ನು ರಕ್ಷಿಸಲಾಗಿದೆ ಮತ್ತು ಸ್ಪಾ ಮಾಲೀಕರಾದ ಸೌಮ್ಯಾ ಎಂಬುವವರ ವಿರುದ್ಧ ಅನೈತಿಕ ಸಂಚಾರ ತಡೆಗಟ್ಟುವಿಕ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
Related Posts
Add A Comment