ಗೋ ಕಳ್ಳತನ, ಗೋವಿನ ಹತ್ಯೆ ವಿರುದ್ಧ ಶಿರಸಿಯಲ್ಲಿ ಬೃಹತ್ ಪ್ರತಿಭಟನೆ
– ಹೀನ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿರುವುದು ತುಂಬಾ ಆತಂಕಕಾರಿ
– ಈ ಪ್ರಕರಣದ ಕುರಿತು ಸರ್ಕಾರ ಮತ್ತು ಪೊಲೀಸ್ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸರಕಾರಕ್ಕೆ ಮನವಿ
NAMMUR EXPRESS NEWS
ಶಿರಸಿ ತಾಲೂಕು ಮತ್ತು ಜಿಲ್ಲೆಯ ಅನೇಕ ಕಡೆಗಳಲ್ಲಿ ಇತ್ತೀಚೆಗೆ ಗೋ ಕಳ್ಳತನದ ಘಟನೆಗಳು ಮತ್ತು ಗೋವಿನ ಹತ್ಯೆ ಹೆಚ್ಚಾಗುತ್ತಿರುವುದು ಅತ್ಯಂತ ಕಳವಳಕಾರಿ ವಿಷಯವಾಗಿದೆ. ಸನಾತನ ಹಿಂದೂ ಧರ್ಮದಲ್ಲಿ ಗೋಮಾತೆಯನ್ನು ಪೂಜ್ಯಭಾವದಿಂದ ಕಾಣಲಾಗುತ್ತದೆ. ಅಂತಹ ಗೋವುಗಳನ್ನು ಅಮಾನುಷವಾಗಿ ಕದ್ದು ಸಾಗಿಸುವ ಹೀನ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿರುವುದು ನಿಜಕ್ಕೂ ಆತಂಕಕಾರಿ ಬೆಳವಣಿಗೆಯಾಗಿದೆ.
ಕಳೆದ ಹಲವಾರು ದಿನಗಳಿಂದ ಈ ರೀತಿಯ ಘಟನೆಗಳು ವರದಿಯಾಗುತ್ತಿದ್ದು, ಇದರಿಂದ ರೈತ ಸಮುದಾಯ ಮತ್ತು ಗೋವುಗಳನ್ನು ಪೂಜಿಸುವ ಹಿಂದೂ ಸಮಾಜದಲ್ಲಿ ಅಶಾಂತಿ ಹಾಗೂ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಅಕ್ರಮ ಚಟುವಟಿಕೆಗಳು ಸಮಾಜದ ಶಾಂತಿಗೆ ಭಂಗ ತರುತ್ತಿವೆ.
ಈ ಕೃತ್ಯಗಳನ್ನು ತೀವ್ರವಾಗಿ ಖಂಡಿಸಿ, ಇಂದು ಶಿರಸಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಸಂಸದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗವಹಿಸಿದರು. ಗೋ ಕಳ್ಳತನ ತಡೆಗಟ್ಟಲು ಮತ್ತು ಈ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ತಕ್ಷಣವೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸರಕಾರಕ್ಕೆ ಮನವಿ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖರು ಉಪಸ್ಥಿತರಿದ್ದರು.
