4 ಜಿಲ್ಲೆಗಳಲ್ಲಿ ಭಾರಿ ಮಳೆ ಅಲರ್ಟ್!
– ಕರಾವಳಿ, ಮಲೆನಾಡಲ್ಲಿ ಅಬ್ಬರಿಸುವ ವರುಣ
– ರಾಜ್ಯದಲ್ಲಿ ಮರೆಯಾದ ಮಳೆರಾಯ
NAMMUR EXPRESS NEWS
ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ ಸೋಮವಾರ, ಮಂಗಳವಾರ, ಬುಧವಾರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯ ಸೂಚನೆ ಇದ್ದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಮಲೆನಾಡಲ್ಲಿ ಅಬ್ಬರಿಸುವ ವರುಣ
ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯೆತೆಯೂ ಇದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸಾಧಾರಣದಿಂದ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಕೆಲವು ಗುಡುಗು, ಮಿಂಚಿನ ಮಳೆಯಾಗುವ ಬಹಳ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.