Categories
ಹವಾಮಾನ ಸುದ್ದಿ

ಮುಂದಿನ 24 ಗಂಟೆ ಭಾರಿ ಮಳೆ

ಮುಂದಿನ 24 ಗಂಟೆ ಭಾರಿ ಮಳೆ

– ಕರಾವಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ
– ಮಲೆನಾಡಿನಲ್ಲೂ ಭಾರಿ ಮಳೆ ಸಾಧ್ಯತೆ
– 2 ದಿನದಿಂದ ಕಡಿಮೆಯಾಗಿದ್ದ ಮಳೆ

NAMMUR EXPRESS NEWS

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಬೆಳಗಾವಿ, ಕಲಬುರಗಿ ಜಿಲ್ಲೆಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಪ್ರತ್ಯೇಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ

ರಾಜಧಾನಿ ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಥಳದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.