ಜುಲೈ 3 ರವರೆಗೆ ಭಾರೀ ಮಳೆ!
– ಕರಾವಳಿಯಲ್ಲಿ ಮಳೆ ಆರ್ಭಟ: ಎಚ್ಚರ ಎಚ್ಚರ
– ಕರಾವಳಿಯಲ್ಲಿ ಎಲ್ಲೋ ಅಲರ್ಟ್
– ಮಲೆನಾಡಲ್ಲೂ ಮಳೆ ಸಾಧ್ಯತೆ
NAMMUR EXPRESS NEWS
ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಜೂನ್ 30 ರಿಂದ ಜುಲೈ 03ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೊ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು, ಕೊಡಗು, ವಿಜಯನಗರ ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮತ್ತು ಶಿವಮೊಗ್ಗ ಉತ್ತರ ಒಳನಾಡಿನ ಚಾಮರಾಜನಗರ, ಕೋಲಾರ, ಬೀದರ್, ಕಲಬುರಗಿ, ವಿಜಯಪುರ, ಮೈಸೂರು, ರಾಮನಗರ, ಹಾಸನ, ಕೊಪ್ಪಳ, ರಾಯಚೂರು, ಧಾರವಾಡ,ಬೆಳಗಾವಿ, ಹಾವೇರಿ, ಗದಗ, ಯಾದಗಿರಿ ಮತ್ತು ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರ ರಾತ್ರಿಯಿಂದ ಗುರುವಾರ ಬೆಳಗ್ಗೆವರೆಗೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 7 ಸೆಂ.ಮೀ, ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ರಾಕ್ನಲ್ಲಿ 6 ಸೆಂ.ಮೀ, ಉತ್ತರ ಕನ್ನಡ ಜಿಲ್ಲೆಯ ಶಿರಾಲಿ, ಗೋಕರ್ಣ, ಅಂಕೋಲಾ, ಕಾರವಾರದಲ್ಲಿ ತಲಾ 5 ಹಾಗೂ ಕದ್ರಾ, ಹೊನ್ನಾವರ ಮತ್ತು ಕುಮಟಾದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!
HOW TO APPLY : NEET-UG COUNSELLING 2023